ಸೊರಬದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ರೋಡ್ ಶೋ

19 sorb 10
Published on

ಸೊರಬ: ರಾಜ್ಯದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಜನತೆಯಿಂದ ಉತ್ತಮ ಬೆಂಬಲ ದೊರೆಯುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ರಾಜ್ಯದಲ್ಲಿ ಸುಮಾರು 140 ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾ„ಸಲಿದೆ ಎಂಬ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಯಾತ್ರೆ ರೋಡ್ ಶೋಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಕಾರ್ಯಕ್ರಮ ಮಾ.25ರಂದು ದಾವಣಗೆರೆಯಲ್ಲಿ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳು ಸಹ ನಡೆಯುತ್ತಿದೆ ಎಂದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿ, ರಾಜ್ಯದ 224 ಕ್ಷೇತ್ರಗಳಲ್ಲೂ ವಿಜಯ ಸಂಕಲ್ಪ ಯಾತ್ರೆ ಯಶಸ್ವಿಯಾಗಿ ನಡೆಯುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮತ್ತು ಮನಗಳಿಗೆ ತಲುಪಿಸುವ ಉದ್ದೇಶದಿಂದ ಯಾತ್ರೆಯನ್ನು ನಡೆಸಲಾಗುತ್ತಿದೆ. ರಾಜ್ಯದಲ್ಲಿ ರಾಷ್ಟ್ರ, ರಾಜ್ಯದ ನಾಯಕರ ನೇತೃತ್ವದಲ್ಲಿ ಎಲ್ಲ್ಲ ಮೋರ್ಚಾಗಳ ಸಭೆಗಳನ್ನು ಸಹ ನಡೆಸಲಾಗುತ್ತಿದೆ. ಈ ಭಾರಿಯ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ, ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ನಿಟ್ಟಿನಲ್ಲಿ ಕಾರ್ಯಯೋಜನೆಯನ್ನು ರೂಪಿಸಿಕೊಳ್ಳಲಾಗಿದೆ. ಈಗಾಗಲೇ ಎಲ್ಲ ಕ್ಷೇತ್ರಗಳಲ್ಲೂ ಪಕ್ಷದ ಮುಖಂಡರ ಮತ್ತು ಕಾರ್ಯಕರ್ತರ ಸಹಕಾರದೊಂದಿಗೆ ಪ್ರಚಾರ ಕಾರ್ಯವನ್ನು ಸಹ ಆರಂಭಿಸಲಾಗಿದೆ ಎಂದು ಹೇಳಿದರು.

ಯಾತ್ರೆಯಲ್ಲಿ ಶಾಸಕರಾದ ಕೆ.ಎಸ್.ಈಶ್ವರಪ್ಪ, ಕುಮಾರ್ ಬಂಗಾರಪ್ಪ, ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ರಾಜು ಎಂ.ತಲ್ಲೂರು, ಯಾತ್ರೆಯ ರಾಜ್ಯ ಸಂಚಾಲಕ ರಾಜೇಂದ್ರ, ಎಸ್.ದತ್ತಾತ್ರಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ತಾಲೂಕು ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ ಕಡಸೂರು, ಮಲ್ಲಿಕಾರ್ಜುನ ವೃತ್ತಿಕೊಪ್ಪ ಸೇರಿದಂತೆ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾ„ಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿ„ಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net