ಸೊಳ್ಳೆ ಉತ್ಪತ್ತಿಯಾಗದಂತೆ ನಿಗಾವಹಿಸಿ

18 YERRISWAMY 04
Published on

ಬಳ್ಳಾರಿ : ಈಡಿಸ್ ಸೊಳ್ಳೆ ಉತ್ಪತ್ತಿಯಾಗುವ ಮನೆ ಒಳಗಿನ ಫ್ರಿಜ್, ಎರ್‌ಕೂಲರ್, ಅಲಂಕೃತ ಗಿಡಗಳ ಕುಂಡಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಡೆಂೆ ಹರಡದಂತೆ ಎಚ್ಚರವಹಿಸಬೇಕು ಎಂದು ಡಿಎಚ್‌ಒ ಡಾ.ವೈ. ರಮೇಶಬಾಬು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಕರು ಶಾಲೆ, ಅಂಗನವಾಡಿಗಳಲ್ಲಿ ಪ್ರಾರ್ಥನೆ ವೇಳೆ ಮಕ್ಕಳಿಗೆ ತಮ್ಮ ಮನೆಯಲ್ಲಿ ನೀರು ಸಂಗ್ರಹಾರಕಗಳನ್ನು ವಾರಕ್ಕೊಮ್ಮೆ ಸ್ವಚ್ಚಗೊಳಿಸಿ ನೀರು ತುಂಬಿದ ನಂತರ ಮುಚ್ಚಳ ಮುಚ್ಚುವಂತೆ ಪಾಲಕರ ಮನವೊಲಿಸಲು ತಿಳಿಸಬೇಕು. ಲಾರ್ವಾ ಪತ್ತೆ ಹಚ್ಚಿ ಮಾಹಿತಿ ತಿಳಿಸಿದ ವಿದ್ಯಾರ್ಥಿಗಳಿಗೆ ಎಲ್ಲರ ಸಮ್ಮುಖದಲ್ಲಿ ಪ್ರಶಂಸಿಸಬೇಕು ಎಂದು ಕೋರಿದ್ದಾರೆ. ವಾರದಲ್ಲಿ ಒಂದು ದಿನ ಶುಕ್ರವಾರದಂದು ಡೆಂೆ ರೋಗ ಹರಡುವ ಈಡಿಸ್ ಸೊಳ್ಳೆ ನಿರ್ಮೂಲನಾ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಮತ್ತು ಜಿಪಂ ಸಹಯೋಗದೊಂದಿಗೆ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿಗಳ ಸಮನ್ವಯದೊಂದಿಗೆ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಗ್ರಾಮ, ವಾರ್ಡ್ಗಳಿಗೆ ಸಿಬ್ಬಂದಿಯೊಂದಿಗೆ ಭೇಟಿ ನೀಡಿದ ವೇಳೆ ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net