ಸೊಳ್ಳೆಗಳ ನಿಯಂತ್ರಣಕ್ಕೆ ಶ್ರಮಿಸಲಿ - ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ

03
Published on

ಬೈಲಹೊಂಗಲ: ಪ್ರತಿಯೊಬ್ಬರೂ ಮನೆಗಳ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡು ಡೆಂಘೆ ಸೊಳ್ಳೆಗಳ ನಿಯಂತ್ರಣಕ್ಕೆ ಶ್ರಮಿಸಬೇಕು. ಉತ್ತಮ ಪರಿಸರದಿಂದ ಮಾತ್ರ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ಈಶಪ್ರಭು ಶಿಕ್ಷಣ ಸಂಸ್ಥೆ ಅಧ್ಯಕ್ಷ, ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಹೇಳಿದರು.

ತಾಲೂಕಿನ ಮಲ್ಲಮ್ಮನ ಬೆಳವಡಿಯ ಈಶಪ್ರಭು ಶಿಕ್ಷಣ ಸಂಸ್ಥೆಯ ವೀರರಾಣಿ ಮಲ್ಲಮ್ಮ ಸ್ಮಾರಕ ಪಿಯು ಕಾಲೇಜು ಮತ್ತು ಬೆಳವಡಿ ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಡೆಂಘೆ ಜ್ವರ ಸುರಕ್ಷತಾ ಜಾಗೃತಿ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಾಲೆ ಕಾಲೇಜುಗಳಲ್ಲಿ ಸ್ವಚ್ಛತೆ ಬಗ್ಗೆ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ನೀಡಬೇಕು. ಮನೆ ಸುತ್ತ ಗಲೀಜು ನೀರು ನಿಲ್ಲದಂತೆ ಮತ್ತು ಕಸಕಡ್ಡಿ ಎಸೆಯದಂತೆ ತಿಳಿವಳಿಕೆ ಮೂಡಿಸಬೇಕು. ಪರಿಸರ ಮಾಲಿನ್ಯದಿಂದ ಡೆಂಘೆ, ಮಲೇರಿಯಾದಂಥ ಅನೇಕ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತವೆ ಎಂದರು.

ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಎ್.ಎಂ. ಮಾರಿಹಾಳ, ಜಿಲ್ಲಾ ಆರೋಗ್ಯ ನಿರೀಕ್ಷಕ ಸುರೇಶ ಮೇದಾರ, ಬಾಹುಬಲಿ ಬೋಗೂರ, ವಿನಾಯಕ ದಳವಾಯಿ, ಡಿ.ಎಸ್. ಝಂಡೇಕರ, ಪ್ರಾಚಾರ್ಯ ಎಂ.ಪಿ. ಉಪ್ಪಿನ ಸೇರಿ ಪ್ರೌಢಶಾಲೆ, ಪಿಯು ಕಾಲೇಜು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net