

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕು ಕುಂದಾಣ ಹೋಬಳಿ ವ್ಯಾಪ್ತಿಯ ಕಾರಹಳ್ಳಿ ಬಿಎಸ್‌ಎ್ ಕ್ಯಾಂಪಸ್‌ನಲ್ಲಿ ಕರೊನಾ ಸೋಂಕಿತ ಯೋಧರ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದ ಎಲ್ಲರೂ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮೇಘಾಲಯದಿಂದ ವಾರದ ಹಿಂದೆ ಬಿಎಸ್‌ಎ್ ಕ್ಯಾಂಪ್‌ಗೆ ಬಂದಿದ್ದ ಸುಮಾರು 700 ಯೋಧರ ಪೈಕಿ 70ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಜಿಲ್ಲಾಡಳಿತ ಯೋಧರನ್ನು ದೇವನಹಳ್ಳಿಯ ಆಕಾಶ್ ಆಸ್ಪತ್ರೆ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿತ್ತು. ಚಿಕಿತ್ಸೆ ಬಳಿಕ ಯೋಧರು ಚೇತರಿಸಿಕೊಂಡಿದ್ದು, ಇನ್ನೆರಡು ದಿನಗಳಲ್ಲಿ ಕ್ಯಾಂಪ್‌ಗೆ ಮರಳಲಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಯೋಧರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರತಿಯೊಬ್ಬರ ತಪಾಸಣೆ ನಡೆಸಲಾಗಿತ್ತು, ಕರೊನಾ ಮುಂಜಾಗ್ರತಾ ಕ್ರಮಗಳನ್ನು ಮತ್ತಷ್ಟು ಹೆಚ್ಚಿಸಲಾಗಿತ್ತು. ಅಲ್ಲದೆ ಸೋಂಕಿತರನ್ನು ತಕ್ಷಣವೇ ಪ್ರತ್ಯೇಕಿಸಿ ಐಸೋಲೇಷನ್ ಮಾಡಿದ್ದರಿಂದ ಸೋಂಕಿನ ತೀವ್ರತೆ ಹರಡಿಲ್ಲ.
ಪ್ರತಿ ಯೋಧರೂ ಈಗಾಗಲೇ ಕರೊನಾ ತಡೆಗೆ ಎರಡೂ ಡೋಸ್ ಪಡೆದಿದ್ದಾರೆ ಎಂಬುದನ್ನು ಜಿಲ್ಲಾ ಆರೋಗ್ಯ ಇಲಾಖೆ ದೃಢಪಡಿಸಿದೆ. ಈ ಹಿನ್ನೆಲೆಯಲ್ಲಿ ಕರೊನಾ ಸೋಂಕಿನಿಂದ ಯಾವುದೇ ಪ್ರಾಣಾಪಾಯವಿಲ್ಲ, ಆರೋಗ್ಯವೂ ಗಂಭೀರ ಸ್ಥಿತಿ ತಲುಪುವುದಿಲ್ಲ. ಆದ್ದರಿಂದ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಂಕಿತ ಎಲ್ಲ ಯೋಧರಿಗೂ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಿದ್ದು ಸದ್ಯದ ಪರಿಸ್ಥಿತಿಯಲ್ಲಿ ಎಲ್ಲರೂ ಚೇತರಿಸಿಕೊಂಡಿದ್ದಾರೆ. ಎಲ್ಲರ ಆರೋಗ್ಯ ಸ್ಥಿರವಾಗಿದೆ. ಅಲ್ಲದೆ ಈಗಾಗಲೇ ಮೇಘಾಲಯದಿಂದ ಬಂದಿಳಿದಿರುವ ಯೋಧರು ಕರೊನಾ ಎರಡೂ ಡೋಸ್ ಪಡೆದಿರುವುದರಿಂದ ಆತಂಕಪಡುವ ಅಗತ್ಯವಿಲ್ಲ. ಕೆ.ಶ್ರೀನಿವಾಸ್, ಜಿಲ್ಲಾಧಿಕಾರಿ ಆಕಾಶ್ ಆಸ್ಪತ್ರೆ ಹಾಗೂ ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದ ಎಲ್ಲ ಯೋಧರು ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಕ್ಯಾಂಪ್‌ನಲ್ಲಿನ ಎಲ್ಲ ಸಿಬ್ಬಂದಿಗೂ ತಪಾಸಣೆ ನಡೆಸಿದ್ದು ನೆಗೆಟಿವ್ ವರದಿ ಹಿನ್ನೆಲೆಯಲ್ಲಿ ಆತಂಕ ದೂರವಾಗಿದೆ. ಡಾ.ತಿಪ್ಪೇಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ