ಸೋಂಕು ತಡೆಗೆ ಕ್ರಮ ಕೈಗೊಳ್ಳಿ

16CBP5
Published on

ಚಿಕ್ಕಬಳ್ಳಾಪುರ : ಶಾಲಾ ಕಾಲೇಜುಗಳು ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಈಗಲೇ ಜಿಲ್ಲೆಯಲ್ಲಿನ ಶೈಕ್ಷಣಿಕ ಸಂಸ್ಥೆ ಮತ್ತು ವಸತಿ ನಿಲಯಗಳ ಕಟ್ಟಡ ಕರೊನಾ ವೈರಸ್ ಸೋಂಕು ಮುಕ್ತ ಎನ್ನುವುದನ್ನು ದೃಢಪಡಿಸಿಕೊಳ್ಳಲು ಜಿ.ಪಂ.ಸಿಇಒ ಬಿ.ೌಜೀಯಾ ತರನ್ನುಮ್ ಆರೋಗ್ಯ ಇಲಾಖೆಗೆ ಸೂಚಿಸಿದರು.

ಜಿ.ಪಂ.ಮಿನಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಕರೊನಾ ನಿಯಂತ್ರಣಕ್ಕೆ ಬಂದಿದೆ. ತ್ವರಿತವಾಗಿ ಸೋಂಕು ಮುಕ್ತ ಪ್ರದೇಶವಾಗಲಿದೆ. ಇದಕ್ಕೆ ಅಧಿಕಾರಿಗಳು ಅಭಿವೃದ್ಧಿ ಕೆಲಸಗಳ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಕ್ವಾರಂಟೈನ್ ಕೇಂದ್ರಗಳಿಗಾಗಿ ಶಿಕ್ಷಣ ಸಂಸ್ಥೆಗಳು ಹಾಗೂ ವಸತಿ ನಿಲಯಗಳನ್ನು ಹೊರತು ಪಡಿಸಿ ಕಲ್ಯಾಣ ಮಂಟಪ, ಸಮುದಾಯ ಭವನಗಳು ಸೇರಿ ಇತರೆ ಕಟ್ಟಡಗಳನ್ನು ಗುರುತಿಸಬೇಕು, ತಾಲೂಕು ಆಸ್ಪತ್ರೆಗಳಿಗೆ ವಿವಿಧ ಯೋಜನೆಯಗಳಡಿ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಇದಕ್ಕೆ ಸಂಬಂಧಿಸಿದಂತೆ ವರದಿಯನ್ನು ಕಾಲ ಕಾಲಕ್ಕೆ ಸಲ್ಲಿಸಬೇಕು ಎಂದರು.

ಶೀಘ್ರದಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಕರೊನಾ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಲಾಗುತ್ತಿದ್ದು ಪ್ರತಿ ನಿತ್ಯ ತಾಲೂಕುಗಳಲ್ಲಿ ಸೋಂಕು ಪತ್ತೆ ಪರೀಕ್ಷೆಗಳನ್ನು ಹೆಚ್ಚಿಗೆ ಕೈಗೊಳ್ಳಬೇಕು. ಜಿಲ್ಲೆಗೆ ಮರಳಿರುವ ವಲಸಿಗರು ಪರೀಕ್ಷೆಗೆ ಒಳಪಟ್ಟಿರುವುದನ್ನು ದೃಢಪಡಿಸಿಕೊಳ್ಳಬೇಕು. ಸೋಂಕು ಹರಡುವಿಕೆ ತಡೆಗೆ ಕಟ್ಟುನಿಟ್ಟಾಗಿ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಬಿ.ಎಂ.ಯೋಗೇಶ್ ಗೌಡ, ಜಿಲ್ಲಾ ಶಸಚಿಕಿತ್ಸಕ ರಮೇಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net