

ಬೇಲೂರು: ಬೇಲೂರಿನ ಲಯನ್ಸ್ ಸಂಸ್ಥೆ ಪದಾಧಿಕಾರಿಗಳು 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಗಳವಾರ ತಾಲೂಕಿನ ಸೋಂಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣ, ವಿದ್ಯಾರ್ಥಿಗಳಿಗೆ ಲೇಖನಿ ಸಾಮಗ್ರಿಗಳನ್ನು ವಿತರಿಸಿದರು.
ಲಯನ್ಸ್ ಸಂಸ್ಥೆ ಅಧ್ಯಕ್ಷ ವೈ.ಬಿ.ಸುರೇಶ್ ಮಾತನಾಡಿ, ರಾಷ್ಟ್ರೀಯ ಹಬ್ಬಗಳಂದು ಪ್ರತಿ ಬಾರಿಯೂ ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಪರಿಕರ, ಪೀಠೋಪಕರಣ ಮತ್ತು ವಿದ್ಯಾರ್ಥಿಗಳಿಗೆ ಲೇಖನಿ ಸಾಮಗ್ರಿಗಳನ್ನು ವಿತರಿಸುತ್ತಿದ್ದೇವೆ. ಆರೋಗ್ಯ, ಶಿಕ್ಷಣ, ಪರಿಸರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವಾ ಚಟುವಟಿಕೆ ನಡೆಸುತ್ತಿದ್ದೇವೆ. ಸೋಂಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ 30 ಸಾವಿರ ರೂ. ಮೌಲ್ಯದ ಪೀಠೋಪಕರಣಗಳನ್ನು ಕೊಡುಗೆ ನೀಡಿದ್ದೇವೆ ಎಂದರು.
ಸೋಂಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ನಿಂಗೇಗೌಡ ಮಾತನಾಡಿದರು. ಲಯನ್ಸ್ ಸಂಸ್ಥೆ ಕ್ಯಾಬಿನೆಟ್ ಸದಸ್ಯ ಡಾ.ಚಂದ್ರಮೌಳಿ, ಮಾಜಿ ಅಧ್ಯಕ್ಷರಾದ ಪೂವಯ್ಯ, ರಮೇಶ್ ಕುಮಾರ್, ಕೆ.ಎಲ್.ಸುರೇಶ್. ದೊಡ್ಡಮನೆ ಪ್ರಭಾಕರ್, ಕಾರ್ಯದರ್ಶಿ ಟಿ.ಬಿ.ರವಿಕುಮಾರ್, ಖಜಾಂಚಿ ಪ್ರಸಾಂತ್, ಪದಾಧಿಕಾರಿಗಳಾದ ಮುಕ್ತಿಯಾರ್, ನೌಷದ್, ನಾಟಿ ವೈದ್ಯ ಉಮೇಶ್, ಸಂತೋಷ್ ಹಾಗೂ ಎಸ್‌ಡಿಎಂಸಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.