

ಚಿತ್ರದುರ್ಗ: ಅನಿರೀಕ್ಷಿತ ಸೋಲಿಗೆ ಕಾರಣಗಳೇನು ಎಂಬ ಕುರಿತು ಚಿತ್ರದುರ್ಗದ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಪಕ್ಷದ ಮುಖಂಡರು ಮಂಗಳವಾರ ಆತ್ಮಾವಲೋಕನಕ್ಕೆ ಮುಂದಾದರು.
ಇಲ್ಲಿನ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಮಾಜಿ ಸಚಿವ ಎಚ್.ಆಂಜನೇಯ, ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್, ಶಾಸಕ ಟಿ.ರಘುಮೂರ್ತಿ, ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಯೋಗೇಶ್ ಬಾಬು, ಮುಖಂಡರಾದ ಜಿ.ಎಸ್.ಮಂಜುನಾಥ್, ಹನುಮಲಿ ಷಣ್ಮುಖಪ್ಪ ಇತರರಿದ್ದರು.