ಸೋಲಿನಿಂದ ಯಾರೂ ಧೃತಿಗೆಡದಿರಿ ; ನಿಖಿಲ್ ಕುವಾರಸ್ವಾಮಿ ಮನವಿ

nn
Published on

 ರಾಮನಗರ : ನಿಖಿಲ್ ಸೋಲಿನ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚನ್ನಪಟ್ಟಣ ತಾಲೂಕಿನ ಕೂಡ್ಲೂರು ಪಂಚಾಯಿತಿಯ ಶ್ರೀರಾಂಪುರದ ಜೆಡಿಎಸ್ ಕಾರ್ಯಕರ್ತ ಹಾಗೂ ಅಭಿವಾನಿ ಮಂಜುನಾಥ್ (ಅಭಿ) ಅವರ ನಿವಾಸಕ್ಕೆ ಜೆಡಿಎಸ್ ಯುವ ಟಕದ ರಾಜ್ಯಾಧ್ಯಕ್ಷ ನಿಖಿಲ್ ಕುವಾರಸ್ವಾಮಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಹಾಗೆಯೇ, ಯುವಕನ ಕುಟುಂಬಕ್ಕೆ ಧೈರ್ಯ ಹೇಳಿದರು. ಇನ್ನೆಂದೂ ಇಂಥ ದುಡುಕಿನ ನಿರ್ಧಾರ ವಾಡಬೇಡ ಎಂದು ಯುವಕನಿಗೆ ಕಿವಿವಾತು ಹೇಳಿದರು.

ಚುನಾವಣೆ ಎಂದ ಮೇಲೆ ಸೋಲು- ಗೆಲುವು ಸಾವಾನ್ಯ. ಸೋಲೇ ಗೆಲುವಿನ ಮೆಟ್ಟಿಲು. ಹೀಗಾಗಿ ಯಾರೂ ಧೃತಿಗೆಡಬಾರದು ಎಂದು ಕಾರ್ಯಕರ್ತರಿಗೆ ನಿಖಿಲ್ ಮನವಿ ವಾಡಿದರು.

ಕಾರ್ಯಕರ್ತರೇ ನಮ್ಮ ಪಕ್ಷದ ಶಕ್ತಿ ಎಲ್ಲರೂ ಪಕ್ಷದ ಜತೆ ನಿಂತು ಕೆಲಸ ವಾಡೋಣ, ಹೋರಾಟ ವಾಡೋಣ. ನಾನು ಸೋತಿದ್ದೇನೆ ಎಂದು ಮನೆಯಲ್ಲಿ ಕೂರುವುದಿಲ್ಲ, ಎದೆಗುಂದುವುದಿಲ್ಲ. ನಿಮ್ಮ ಜತೆ ನಾನು ಇರ್ತೀನಿ, ಪಕ್ಷ ಇರುತ್ತೆ. ಯಾರೂ ಧೃತಿಗೆಡಬಾರದು ಎಂದರು.

ಮನೆಗೆ ಆಧಾರವಾಗಿದ್ದ ಮಂಜುನಾಥ್ ಅವರು ಈ ರೀತಿ ವಾಡಿಕೊಂಡಿದ್ದಕ್ಕೆ ಬಹಳ ಬೇಸರವಾಯಿತು. ಈ ತರ ವಾಡಿಕೊಳ್ಳ ಬೇಡಿ ನಿಮ್ಮ ಜತೆ ನಾನಿರುತ್ತೇನೆ, ಎರಡು ಮಕ್ಕಳಿವೆ ಮನಸ್ಸು ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ ನಿಮ್ಮ ಜತೆ ಇರ್ತೇನೆ, ತಾಲೂಕಿನಲ್ಲಿ ದೇವೇಗೌಡರು ಹಾಗೂ ಕುವಾರಣ್ಣ ಮತ್ತು ಪಕ್ಷದ ಮೇಲೆ ಕಾರ್ಯಕರ್ತರು ಪ್ರಾಣ ಇಟ್ಟುಕೊಂಡಿದ್ದಾರೆ. ಯಾರು ಧೈರ್ಯ ಕಳೆದುಕೊಳ್ಳಬೇಡಿ ಎಂದು ನಿಖಿಲ್ ಮನವಿ ವಾಡಿದರು.

ಚನ್ನಪಟ್ಟಣ ತಾಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು, ಮುಖಂಡ ಕುಕ್ಕೂರ ದೊಡ್ಡಿ ಜಯರಾಮ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net