ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಿ

19KMD-1
ಚಿಕ್ಕರಸಿನಕೆರೆಯಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್. ಕಾಳೀರಯ್ಯ ಚಾಲನೆ ನೀಡಿದರು. ಕ್ಷೇತ್ರ ಸಮನ್ವಯ ಅಧಿಕಾರಿ ಹನುಮಶೆಟ್ಟಿ, ಸಿಆರ್‌ಪಿ ನಂದೀಶ್, ಮುಖ್ಯ ಶಿಕ್ಷಕರಾದ ಆದಿಯಪ್ಪ, ಮಂಜುಳಾ ಮತ್ತಿತರು ಇದ್ದರು.
Published on

ಕೆ.ಎಂ.ದೊಡ್ಡಿ: ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದಾಗ ಮಾತ್ರ ಕ್ರೀಡಾಕೂಟಕ್ಕೆ ಅರ್ಥ ಬರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್. ಕಾಳೀರಯ್ಯ ಹೇಳಿದರು.
ಸಮೀಪದ ಚಿಕ್ಕರಸಿನಕೆರೆಯಲ್ಲಿ ಹೋಬಳಿ ಮಟ್ಟದ ಕ್ರೀಡಾ ಕೂಟಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವ ಮೂಲಕ ಉತ್ತಮ ಆರೋಗ್ಯ ಕಾಪಡಿಕೊಳ್ಳಬಹುದು ಎಂದು ಅವರು ಕಿವಿಮಾತು ಹೇಳಿದರು.
ಗ್ರಾಮೀಣ ಪ್ರದೇಶದ ಮಕ್ಕಳು ಯಾವುದಕ್ಕೂ ಕಡಿಮೆ ಇಲ್ಲ. ಹಳ್ಳಿಯಿಂದ ಬಂದ ಎಷ್ಟೋ ಕ್ರೀಡಾಪಟುಗಳ ರಾಜ್ಯ, ರಾಷ್ಟ ಮಟ್ಟದಲ್ಲಿ ಸಾಧನೆ ಮಾಡಿ ಕೀರ್ತಿಪತಾಕೆಯನ್ನು ಹಾರಿಸಿದ್ದಾರೆ ಎಂದರು.
ಮಂಡ್ಯದ ಡಯಟ್ ಹಿರಿಯ ಉಪನ್ಯಾಸಕ ರಾಮು, ದೈಹಿಕ ಶಿಕ್ಷಣ ಪರಿವೀಕ್ಷಕ ರಮೇಶ್ ಪ್ರಭು, ತಾಪಂ ಮಾಜಿ ಸದಸ್ಯ ಭರತೇಶ್, ಗ್ರಾಪಂ ಅಧ್ಯಕ್ಷೆ ಗೌರಮ್ಮ, ಮುಖ್ಯ ಶಿಕ್ಷಕಿ ಮಂಜುಳಾ, ಕ್ಷೇತ್ರ ಸಮನ್ವಯ ಅಧಿಕಾರಿ ಹನುಮಶೆಟ್ಟಿ, ಮುಖ್ಯ ಶಿಕ್ಷಕ ಆದಿಯಪ್ಪ, ಸಿಆರ್‌ಪಿ ನಂದೀಶ್ ಮತ್ತಿತರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net