ಸೋಲು, ಗೆಲುವು ಸಮನಾಗಿ ಸ್ವೀಕರಿಸಿ

2309Klb12
Published on

ಕಲಬುರಗಿ: ಮಾನಸಿಕ, ದೈಹಿಕ ಸದೃಢಗೊಳಿಸುವಲ್ಲಿ ಕ್ರೀಡೆ ಮಹತ್ವದ ಪಾತ್ರ ನಿರ್ವಹಿಸುತ್ತದೆ ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ಹೇಳಿದರು.

ನಗರದ ಚಂದ್ರಶೇಖರ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಂಡ ದಸಾರಾ ಸಿಎಂ ಕಪ್ ಕಲಬುರಗಿ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಕ್ರೀಡಾಪಟುಗಳು ಸೋಲು, ಗೆಲುವಿನ ಬಗ್ಗೆ ಚಿಂತಿಸದೆ ಮುಂದೆ ಸಾಗಬೇಕು. ಪರಸ್ಪರ ಖುಷಿಯಿಂದ ಆಟವಾಡಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧಕರಾಗಿ ಹೊರ ಹೊಮ್ಮಬೇಕು ಎಂದರು.
ಪ್ರತಿಭೆ ಇದ್ದವರು ಮಾತ್ರ ಮೇಲೇರಲು ಕ್ರೀಡೆಗಳಲ್ಲಿ ಸಾಧ್ಯವಿದೆ. ನಿಮ್ಮ ಪ್ರತಿಭೆ ತಾಲೂಕು ಅಥವಾ ಜಿಲ್ಲಾ ಮಟ್ಟಕ್ಕೆ ಸೀಮೀತ ಮಾಡದಿರಿ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪಾಲ್ಗೊಳ್ಳುವ ಮೂಲಕ ನಮ್ಮ ತಾಲೂಕಿಗೆ ಕೀರ್ತಿ ಹೆಚ್ಚಳ ಮಾಡಬೇಕು. ಸೋಲು ಮತ್ತ ಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದರು.
ತಾಲೂಕು ದೈಹಿಕ ಶಿಕ್ಷಣ ವಿಷಯ ಪರಿವೀಕ್ಷಕ ಸಂತೋಷ ಡಿಗ್ಗಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುರೇಶ ಕೆ., ಹಾಕಿ ತರಬೇತುದಾರ ಸಂಜಯ್ ಬಾಣದ್, ಬ್ಯಾಸ್ಕೆಟ್ ಬಾಲ್ ತರಬೇತುದಾರ ಪ್ರವೀಣ ಪುಣೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net