ಸೌಜನ್ಯ ಸಾವಿನ ಪ್ರಕರಣ ಸಿಬಿಐಗೆ ಒಪ್ಪಿಸಿ

13ydg03
Published on

ಯಾದಗಿರಿ: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮತ್ತೊಮ್ಮೆ ತನಿಖೆ ನಡೆಸುವಂತೆ ಒತ್ತಾಯಿಸಿ ಬುಧವಾರ ಶ್ರೀರಾಮ ಸೇನೆ ಜಿಲ್ಲಾ ಘಟಕದಿಂದ ಇಲ್ಲಿನ ಜಿಲ್ಲಾಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕಳೆದ 13 ವರ್ಷದ ಹಿಂದೆ ಮಂಗಳೂರು ಜಿಲ್ಲೆ, ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 17 ವರ್ಷದ ಅಪ್ರಾಪ್ತ ಬಾಲಕೀಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ನಡೆದಿತ್ತು. ಆದರೆ 13 ವರ್ಷ ಕಳೆದರೂ ಸಂತ್ರಸ್ತೆ ಕುಟುಂಬ ವರ್ಗಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ. ರಾಜ್ಯದ್ಯಂತ ಸಾಕಷ್ಟು ಹೋರಾಟಗಳು, ಪ್ರತಿಭಟನೆಗಳು ನಡೆದು ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದರೂ

ಸರಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಮೌನವಾಗಿದೆ ಎಂದು ಕಾರ್ಯಕರ್ತರು ಆರೋಪಿಸಿದರು. ಈ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐಗೆ ಒಪ್ಪಿಸಬೇಕು ಅಥವಾ ಹಾಲಿ ಉಚ್ಛ ನ್ಯಾಯಾಲಯದ ನ್ಯಾಯಾಶರ ನೇತೃತ್ವದಲ್ಲಿ ಸಮಿತಿ ರಚಿಸಿ ಮರುತನಿಖೆ ನಡೆಸಬೇಕು. ತನಿಖೆಯಲ್ಲಿ ಕರ್ತವ್ಯ ಲೋಪವೆಸಿರುವ ಸಕರ್ಾರಿ ವೈದ್ಯರು, ಪೊಲೀಸ್ ತನಿಖಾಕಾರಿ ಹಾಗೂ ಸಂಬಂಧಪಟ್ಟವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು.

ಸೌಜನ್ಯ ಕುಟುಂಬಕ್ಕೆ ಹಾಗೂ ಮಾಡದ ತಪ್ಪಿಗೆ 6 ವರ್ಷ ಜೈಲು ಶಿಕ್ಷೆ ಅನುಭವಿಸಿ ನಿರಪರಾಧಿ ಎಂದು ಸಾಬೀತಾಗಿರುವ ಸಂತೋಷರಾವ್ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ನೀಡಬೇಕು. ಸೌಜನ್ಯ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net