ಸೌಜನ್ಯಾ ಪ್ರಕರಣ ಮರು ತನಿಖೆಗೆ ಆಗ್ರಹ- ಜಿಲ್ಲಾಧಿಕಾರಿಗೆ ಶ್ರೀರಾಮಸೇನೆ ಮನವಿ ಸಲ್ಲಿಕೆ

Screenshot_2023-09-15-14-14-03-670_com.android.chrome.jpg
Published on

ದಾವಣಗೆರೆ: ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ಮಾಡಿಸಬೇಕು ಎಂದು ಶ್ರೀರಾಮ ಸೇನೆ ಜಿಲ್ಲಾ ಘಟಕ ಆಗ್ರಹಿಸಿದೆ.

ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಈ ಕುರಿತು ಮನವಿ ಸಲ್ಲಿಸಿದರು. ಈ ಪ್ರಕರಣ ನಡೆದು 13 ವರ್ಷಗಳಾದರೂ ಇನ್ನೂ ನ್ಯಾಯ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಅನೇಕ ಹೋರಾಟಗಳು ನಡೆದರೂ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಮೌನವಾಗಿದೆ ಎಂದು ಖಂಡಿಸಿದರು. ಪ್ರಕರಣವನ್ನು ರಾಜ್ಯ ಸರ್ಕಾರ ಮರು ತನಿಖೆಗಾಗಿ ಸಿಬಿಐಗೆ ಒಪ್ಪಿಸಬೇಕು ಅಥವಾ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿ ಮರು ತನಿಖೆ ನಡೆಸಬೇಕು. ತನಿಖೆಯಲ್ಲಿ ಕರ್ತವ್ಯ ಲೋಪ ಎಸಗಿದ ಸರ್ಕಾರಿ ವೈದ್ಯರು, ಪೊಲೀಸ್ ತನಿಖಾಧಿಕಾರಿ, ಸಂಬಂಧಪಟ್ಟ ಕರ್ತವ್ಯಲೋಪ ಮಾಡಿದ ಅಧಿಕಾರಿಗಳನು ಅಮಾನತು ಮಾಡಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದರು. ಸೌಜನ್ಯಾ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಕೂಡಲೇ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಮಣಿ ಸರ್ಕಾರ್, ಮುಖಂಡರಾದ ರಾಹುಲ್, ಆಲೂರು ರಾಜಶೇಖರ್, ಆನಂದ್ ಜ್ಯೋತಿ, ಪಿ. ಸಾಗರ್, ಅನಿಲ್ ಸುರ್ವೆ, ಶ್ರೀಧರ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net