ಸೌರಶಕ್ತಿ ಅಳವಡಿಕೆಯಿಂದ ಆರ್ಥಿಕ ಅಭಿವೃದ್ಧಿ

24-08-Shiva-6
ರಾಯಚೂರಿನ ಜಿ.ಪಂ. ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಬ್ಯಾಂಕರ್‌ಗಳ ಕಾರ್ಯಾಗಾರವನ್ನು ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಉದ್ಘಾಟಿಸಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕ ರವಿಕುಮಾರ, ಕರ್ನಾಟಕ ಗ್ರಾಮೀಣ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕ ಜಗನ್ನಾಥ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮನಿಕ್ ರಗೋಗಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ ಇದ್ದರು.
Published on

ರಾಯಚೂರು: ನವೀಕರಿಸಬಹುದಾದ ಇಂಧನಗಳಲ್ಲಿ ಒಂದಾಗಿರುವ ಸೌರಶಕ್ತಿ ಬಳಕೆಯಿಂದ ಉದ್ಯೋಗದಲ್ಲಿ ಖರ್ಚು ಕಡಿಮೆ ಮಾಡುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದಾಗಿದೆ ಎಂದು ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಹೇಳಿದರು.
ಸ್ಥಳೀಯ ಜಿ.ಪಂ. ಸಭಾಂಗಣದಲ್ಲಿ ಸೆಲ್ಕೋ ೌಂಡೇಷನ್ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಹಣಕಾಸು ವಿಕೇಂದ್ರೀಕೃತ ನವೀಕರಿಸಬಹುದಾದ ಇಂಧನ ಆಧಾರಿತ ಸುಸ್ಥಿರ ಜೀವನೋಪಾಯಗಳ ಕುರಿತು ಜಿಲ್ಲಾ ಮಟ್ಟದ ಬ್ಯಾಂಕರ್‌ಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸ್ವಯಂ ಉದ್ಯೋಗ ಮಾಡಲು ಇಚ್ಛಿಸುವ ಮಹಿಳೆಯರಿಗೆ, ನಿರುದ್ಯೋಗಿಗಳು ಮತ್ತು ಕೃಷಿಕರ ಸೋಲಾರ್ ಆಧಾರಿತ ಯಂತ್ರಗಳನ್ನು ಬಳಸಿಕೊಂಡು ಉದ್ಯೋಗ ಕಂಡು ಕೊಳ್ಳಬಹುದಾಗಿದೆ. ಸ್ವಯಂ ಉದ್ಯೋಗಗಳಲ್ಲಿ ಸೌರಶಕ್ತಿ ಬಳಕೆಯಿಂದ ಹೆಚ್ಚಿನ ಉಪಯೋಗವಾಗಲಿದೆ.
ಸೋಲಾರ್ ಆಧಾರಿತ ಯಂತ್ರ ಬಳಸಿಕೊಳ್ಳಲು ಯಾವುದೇ ಅಡೆತಡೆಗಳಿದ್ದಲ್ಲಿ ಬ್ಯಾಂಕ್‌ಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಸೆಲ್ಕೋದಿಂದ ಹಮ್ಮಿಕೊಂಡಿರುವ ಕಾರ್ಯಾಗಾರದಲ್ಲಿ ಗೊಂದಲ, ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದಾಗಿದೆ ಎಂದು ರಾಹುಲ್ ತುಕಾರಾಮ್ ಪಾಂಡ್ವೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸೆಲ್ಕೋ ೌಂಡೇಷನ್ ನಿರ್ದೇಶಕಿ ಹುದಾ ಜಾರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ರವಿಕುಮಾರ, ಕರ್ನಾಟಕ ಗ್ರಾಮೀಣ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕ ಜಗನ್ನಾಥ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮನಿಕ್ ರಗೋಗಿ, ಎಸ್‌ಬಿಐ ವಿಭಾಗೀಯ ವ್ಯವಸ್ಥಾಪಕ ಜಿ.ಕೃಷ್ಣ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net