ಸೌಲಭ್ಯ ಕಲ್ಪಿಸಿ ಯೋಜನೆ ಜಾರಿಗೊಳಿಸಲಿ

13 skpp 4
Published on

ಸಕಲೇಶಪುರ: ಮೂಲ ಸೌಲಭ್ಯ ಕಲ್ಪಿಸದೆ ಸರ್ಕಾರ ಯೋಜನೆ ಪ್ರಕಟಿಸಿರುವುದರಿಂದ ಜನರಿಗೆ ಹೆಚ್ಚಿನ ಅನುಕೂಲವಾಗದು ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು.


ಪಟ್ಟಣದ ಅರೇಹಳ್ಳಿ ಬೀದಿಯಲ್ಲಿ ಬುಧವಾರ ನಮ್ಮ ಕ್ಲಿನಿಕ್ ಉದ್ಘಾಟಿಸಿ ಮಾತನಾಡಿ, ಈಗಿರುವ ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ, ವೈದ್ಯರ ಕೊರತೆ ಹೆಚ್ಚಿದೆ. ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳಿಲ್ಲದೆ ರೋಗಿಗಳು ಜಿಲ್ಲಾಸ್ಪತ್ರೆಗೆ ತೆರಳುವಂತಾಗಿದೆ. ಇಂತಹ ಸಂದರ್ಭದಲ್ಲಿ ನಮ್ಮ ಕ್ಲಿನಿಕ್‌ನಂತಹ ಯೋಜನೆ ಜಾರಿಗೊಳಿಸಿರುವುದು ಪ್ರಯೋಜನವಿಲ್ಲ. ಇದರ ಬಗ್ಗೆ ಜನರು ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳುವಂತ್ತಿಲ್ಲ. ಆದ್ದರಿಂದ ಸರ್ಕಾರ ಯೋಜನೆ ಜಾರಿಗೊಳಿಸುವುದರೊಂದಿಗೆ ಮೂಲ ಸೌಕರ್ಯ ಒದಗಿಸುವ ಕಡೆಗೂ ಹೆಚ್ಚಿನ ಗಮನ ಹರಿಸಿದಾಗ ಮಾತ್ರ ಜನರಿಗೆ ಇಂತಹ ಯೋಜನೆಯ ಫಲ ದೊರೆಯಲಿದೆ ಎಂದರು.


ತಹಸೀಲ್ದಾರ್ ಮೇಘನಾ, ತಾಲೂಕು ಆರೋಗ್ಯಾಧಿಕಾರಿ ಮಹೇಶ್, ಕ್ರಾಫರ್ಡ್ ಆಸ್ಪತ್ರೆ ವೈದ್ಯಾಧಿಕಾರಿ ಅರುಣ್‌ಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net