ಸೌಲಭ್ಯ ಕೊಡಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Sabhe
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.3868257, 0.6049285);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 36;
Published on

ಚಿತ್ರದುರ್ಗ: ಸರ್ಕಾರದಿಂದ ಕಟ್ಟಡ ಕಾರ್ಮಿಕರಿಗೆ ಸಿಗುವ ವಿವಿಧ ರೀತಿಯ ಸೌಲಭ್ಯ ಕೊಡಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭಾರತೀಯ ರಾಷ್ಟ್ರೀಯ ಕಟ್ಟಡ ನಿರ್ಮಾಣ ಫರೆಸ್ಟ್ ಮತ್ತು ಬಡಗಿ ಕೆಲಸಗಾರರ ಒಕ್ಕೂಟದ ಅಧ್ಯಕ್ಷ ದಿನೇಶ್ ತಿಳಿಸಿದರು.

ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಒಕ್ಕೂಟದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.

ಯಾವ ಸಮಸ್ಯೆ ಇದ್ದರೂ ರಾಜ್ಯ ಸರ್ಕಾರದಿಂದ ಬಗೆಹರಿಸಿಕೊಳ್ಳೋಣ. ಒಕ್ಕೂಟದ ಪದಾಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ಮಾಡಿದರೆ, ಕೆಲಸಗಾರರಿಗೆ ಸಾಕಷ್ಟು ಅನುಕೂಲ ಮಾಡಿಕೊಡಬಹುದು ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿ, ಈ ಒಕ್ಕೂಟ ಚುನಾವಣೆ ವೇಳೆ ಕಾಂಗ್ರೆಸ್ ಪರ ನಿಂತು ಮತ ಹಾಕಿಸುವಲ್ಲಿ ಶ್ರಮಿಸಿದ್ದರ ಫಲ ವಿವಿಧೆಡೆ ಗೆಲುವು ಸಾಧಿಸಲು ಸಹಕಾರಿಯಾಗಿದೆ. ಕಾರ್ಮಿಕರು ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಪಡೆದು, ಕಟ್ಟಡ ನಿರ್ಮಿಸಿ, ಅಗತ್ಯ ಇರುವವರಿಗೆ ತರಬೇತಿ ನೀಡುವ ಮೂಲಕ ಸದುಪಯೋಗ ಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಒಕ್ಕೂಟದ ಉಪಾಧ್ಯಕ್ಷ ಎ.ಜಾಕೀರ್ ಹುಸೇನ್ ಮಾತನಾಡಿ, ಒಕ್ಕೂಟದಿಂದ ಜಮೀನನ್ನು ಖರೀದಿಸಲಾಗಿದೆ. ಆದರೆ, ಹಕ್ಕು ಪತ್ರ ನೀಡಲು ಪ್ರಯತ್ನಿಸಿದರೂ ಆಗಿಲ್ಲ. ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ ಗಮನ ಸೆಳೆದು ವಿತರಿಸಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.

ಮುಖಂಡರಾದ ಆರ್.ಕೆ.ಸರ್ದಾರ್, ಡಿ.ಎನ್.ಮೈಲಾರಪ್ಪ, ಪೈಲ್ವಾನ್ ತಿಪ್ಪೇಸ್ವಾಮಿ, ಟಿಪ್ಪು ಖಾಸಿಂ ಆಲಿ, ಯೂಸೆಫ್, ಮೆಹಬೂಬ್ ಖಾನ್, ಬಾಬು, ಸಾಧಿಕ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net