ಸೌಲಭ್ಯ ಪಡೆದು ಆರ್ಥಿಕ ಸಬಲರಾಗಿ

ಸರ್ಕಾರದ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಿ3
Published on


ಯಾದಗಿರಿ: ಸರ್ಕಾರದ ವಿವಿಧ ಯೋಜನೆಗಳಲ್ಲಿ ಆಯ್ಕೆಯಾದ ಲಾನುಭವಿಗಳಿಗೆ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗುವಂತೆ ಅರಿವು ಮೂಡಿಸುವ ಜವಾಬ್ದಾರಿ ಅಕಾರಿಗಳದ್ದು ಎಂದು ಜಿಲ್ಲಾಕಾರಿ ಸ್ನೇಹಲ್ ಆರ್., ಸೂಚನೆ ನೀಡಿದರು.

ಗುರುವಾರ ಇಲ್ಲಿನ ಜಿಲ್ಲಾಕಾರಿ ಕಚೇರಿಯ ಸಭಾಂಗಣದಲ್ಲಿ ಕರೆದಿದ್ದ ಪ್ರಸಕ್ತ ಸಾಲಿನ ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ದೇವದಾಸಿ ಪುರ್ವಸತಿ ಯೋಜನೆಯಡಿ ಆದಾಯ ಉತ್ಪನ ಚಟುವಟಿಕೆ ಯೋಜನೆಯಡಿ ಲಾನುಭವಿಗಳ ಆಯ್ಕೆ ಸಮಿತಿ ಸಭೆಯಲ್ಲಿ ಮಾತನಾಡಿ, ಸಕರ್ಾರ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದರು.

ಟ್ರಾನ್ಸ್ಜೆಂಡರ್ಗಳ ಸಮಸ್ಯೆಗೆ ಸ್ಪಂದಿಸಬೇಕು. ಅವರಿಗೆ ಸಕರ್ಾರದಿಂದ ಸಿಗುವ ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸಬೇಕು. ಚೇತನ ಯೋಜನೆಯಡಿ 09, ಧನಶ್ರೀ ಯೋಜನೆಯಡಿ 11, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ 15 ಹಾಗೂ ಆದಾಯ ಉತ್ಪನ್ನ ಚಟುವಟಿಕೆ-07 ಲಾನುಭವಿಗಳು ಆಯ್ಕೆಗೊಂಡಿದ್ದಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net