ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Published on

ಚಾಮರಾಜನಗರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಮತ್ತು ಅರಣ್ಯ ಆದಿವಾಸಿ ಸಮುದಾಯಗಳ ಅಭಿವೃದ್ಧಿ ಯೋಜನೆಯಡಿ 2025-26ನೇ ಸಾಲಿನ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.25ರವರೆಗೆ ವಿಸ್ತರಿಸಲಾಗಿದೆ.

ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ (2 ಲಕ್ಷ ), ಮೈಕ್ರೋ ಕ್ರೆಡಿಟ್ ಪ್ರೇರಣಾ, ಗಂಗಾ ಕಲ್ಯಾಣ, ಭೂ ಒಡೆತನ, ಸ್ವಾವಲಂಬಿ ಸಾರಥಿ ಯೋಜನೆಗಳಿಗೆೆ ಸೇವಾಸಿಂಧು ಪೋರ್ಟಲ್ ಠಿಠಿ://ಛಿಜ್ಞಿಜ್ಠ.ಚ್ಟ್ಞಠಿ.ಜಟ.ಜ್ಞಿ/ಮೂಲಕ ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ಸೇವಾಸಿಂಧು ಪೋರ್ಟಲ್ ನಲ್ಲಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕೆಲ ತಾಂತ್ರಿಕ ಸಮಸ್ಯೆಗಳು ಉಂಟಾಗಿರುವುದರಿಂದ ಸೆಪ್ಟೆಂಬರ್ 25ರವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಹಾಯವಾಣಿ ಸಂಖ್ಯೆ 9482-300-400 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net