

ಯಾದಗಿರಿ: ಮಹಿಳೆಯರ ಹಾಗೂ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಸರಕಾರ ಹಲವು ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದ್ದು, ಈ ಸೌಲಭ್ಯಗಳಿಂದ ಯಾರೂ ಸಹ ವಂಚಿತರಾಗದಂತೆ ಕ್ರಮ ವಹಿಸಲು ಸಂಬಂಸಿದ ಅಕಾರಿಗಳಿಗೆ ಜಿಲ್ಲಾಕಾರಿ ಡಾ.ಸುಶೀಲಾ ಬಿ., ಸೂಚಿಸಿದರು.
ಇಲ್ಲಿನ ಜಿಲ್ಲಾಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಸಂಜೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿ, ಇಲಾಖೆಯಲ್ಲಿ ಜಾರಿಯಲ್ಲಿರುವ ಅನೇಕ ಯೋಜನೆ, ಸೇವೆಗಳನ್ನು ಒಗ್ಗೂಡಿಸಿ ನೀಡುವ ವ್ಯವಸ್ಥೆಯನ್ನು ಉತ್ತಮ ಪಡಿಸುವಲ್ಲಿ ಅಕಾರಿಗಳು ಹೆಚ್ಚು ಒತ್ತು ಕೊಡಬೇಕು ಎಂದರು.
ಮಕ್ಕಳ ಮತ್ತು ಮಹಿಳೆಯರಿಗಾಗಿ ಸರಕಾರ ಐಸಿಡಿಎಸ್ ಜಿಲ್ಲಾ ಮಟ್ಟದ ಸಮಿತಿ, ರಾಷ್ಟ್ರೀಯ ಪೋಷಣ್ ಅಭಿಯಾನ, ಪ್ರಧಾನಮಂತ್ರಿ ಮಾತೃವಂದನಾ, ಬಾಲ್ಯವಿವಾಹ ತಡೆಯುವ ಮತ್ತು ಮಾನವ ಕಳ್ಳ ಸಾಗಾಣಿಕೆ ತಡೆ ಸಮಿತಿ, ಜಿಲ್ಲಾಮಟ್ಟದ ಸ್ವಾಧಾರ ಗೃಹ ಸಮನ್ವಯ ಸಮಿತಿ ಹೀಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ವಿವರಿಸಿದರು.