

ಚಿಕ್ಕಮಗಳೂರು: ಸರ್ಕಾರ ಮತ್ತು ಸಂಘ ಸಂಸ್ಥೆಗಳಿAದ ದೊರೆಯುವ ಸೌಲಭ್ಯ ಮತ್ತು ಸವಲತ್ತುಗಳನ್ನು ಮಕ್ಕಳು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾವಂತರಾಗಿ ಹೊರಹೊಮ್ಮಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಸಲಹೆ ನೀಡಿದರು.
ಶಿಕ್ಷಣ ಇಲಾಖೆ ನೌಕರರ ಡಾ ರಾಧಾಕೃಷ್ಣನ್ ವಿವಿಧೋz್ದೆÃಶ ಸಹಕಾರ ಸಂಘ ನಗರದ ಬಸವನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುz್ದÉÃಶಿಸಿ ಮಾತನಾಡಿದರು.
ಬಹಳಷ್ಟು ವರ್ಷಗಳ ಹಿಂದೆ ಬಡ ಮಕ್ಕಳಿಗೆ ಶಿಕ್ಷಣ ಮರೀಚಿಕೆಯಾಗಿತ್ತು, ವಿದ್ಯಾಭ್ಯಾಸಕ್ಕೆ ಯಾವುದೇ ಸೌಲಭ್ಯ ಮತ್ತು ಸವಲತ್ತುಗಳು ದೊರೆಯುತ್ತಿರಲಿಲ್ಲ, ಆದರೆ ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣಕ್ಕಾಗಿ ಕೋಟ್ಯಾಂತರ ರೂ. ವ್ಯಯಿಸುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ, ಸಮವಸ್ತç ಸೇರಿದಂತೆ ಅನೇಕ ಸೌಲಭ್ಯ, ಸವಲತ್ತುಗಳ ಜೊತೆಗೆ ಉಚಿತವಾಗಿ ಶಿಕ್ಷಣವನ್ನು ನೀಡುತ್ತಿವೆ. ಸಂಘ ಸಂಸ್ಥೆಗಳೂ ಸಹ ಬಡ ವಿದ್ಯಾರ್ಥಿಗಳಿಗೆ, ಪ್ರತಿಭಾವಂತರಿಗೆ ನೆರವು ನೀಡುತ್ತಿವೆ ಎಂದರು.
ವಿದ್ಯಾರ್ಥಿಗಳು ಇವುಗಳನ್ನು ಸದ್ಬಳಕೆ ಮಾಡಿಕೊಂಡು ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯಾರ್ಜನೆ ಮಾಡಿ ವಿದ್ಯಾವಂತರಾಗಿ ಹೊರಹೊಮ್ಮಿದರೆ ಮಾತ್ರ ಸರ್ಕಾರ ಮತ್ತು ಸಂಘ ಸಂಸ್ಥೆಗಳ ಶ್ರಮ ಸಾರ್ಥಕವಾಗುತ್ತದೆ ಎಂದು ಹೇಳಿದರು.
ಶಿಕ್ಷಣ ಇಲಾಖೆ ನೌಕರರ ಡಾ.ರಾಧಾಕೃಷ್ಣನ್ ವಿವಿಧೋz್ದÉÃಶ ಸಹಕಾರ ಸಂಘದ ಅಧ್ಯಕ್ಷ ಎಲ್.ಜಿ.ಪರಮೇಶ್ವರಪ್ಪ ಮಾತನಾಡಿ, ವಿದ್ಯೆ ಯಾರೂ ಕದಿಯಲಾಗದ ಸಂಪತ್ತು. ವಿದ್ಯಾವಂತರಾದರೆ ಮಾತ್ರ ಸಮಾಜ ನಮ್ಮನ್ನು ಗೌರವಿಸುತ್ತದೆ. ಸೂಕ್ತ ಸ್ಥಾನಮಾನ ನೀಡುತ್ತದೆ. ಶಿಕ್ಷಣವಂತರಾಗುವುದರಿAದ ನಮ್ಮ ಭವಿಷ್ಯ ಉಜ್ವಲವಾಗುತ್ತದೆ ಎಂದರು.
ಮಕ್ಕಳನ್ನು ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸಂಘದಿAದ ಪ್ರತಿವರ್ಷ ಪ್ರತಿಭಾ ಪುರಸ್ಕಾರ ಮಾಡಲಾಗುತ್ತಿದೆ. ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾತ್ರರಾದ ಶಿಕ್ಷಕರನ್ನು ಸನ್ಮಾನಿಸಿ, ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.
೨೦೧೧ರಲ್ಲಿ ತಾವು ಅಧ್ಯಕ್ಷರಾಗಿ ಆಯ್ಕೆಯಾದ ವೇಳೆ ಸಂಘದಲ್ಲಿ ಕೇವಲ ೩ ಲಕ್ಷ ಹಣವಿತ್ತು. ಇದೀಗ ಸಂಘದ ವ್ಯವಹಾರ ೨೫ ಲಕ್ಷ ರೂ. ದಾಟಿದೆ. ಸದಸ್ಯರಿಗೆ ನೀಡುವ ಸಾಲದ ಮೊತ್ತವನ್ನು ಹತ್ತರಿಂದ ಐವತ್ತು ಸಾವಿರಕ್ಕೆ ಏರಿಸಲಾಗಿದೆ. ಹಲವು ಸವಾಲುಗಳನ್ನು ಎದುರಿಸಿ ಬಡಾವಣೆಗಳನ್ನು ನಿರ್ಮಿಸಿ ಶಿಕ್ಷಕರಿಗೆ ನಿವೇಶನಗಳನ್ನು ವಿತರಿಸಲಾಗಿದೆ. ಸಂಘ ಈ ವರ್ಷ ೮೭ ಸಾವಿರ ರೂ. ನಿವ್ವಳ ಲಾಭ ಗಳಿಸಿದ್ದು, ಲಾಭದ ಹಣದಲ್ಲಿ ಶೇ ೫ರಷ್ಟು ಡಿವಿಡೆಂಟ್ ಸದಸ್ಯರಿಗೆ ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾತ್ರರಾದ ಹರೀಶ್ ಕುಮಾರ್ ಮತ್ತು ವಿಜಯಲಕ್ಷ್ಮಿ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು. ಸಂಘದ ನಿರ್ದೇಶಕರಾದ ಎಲ್.ಟಿ.ಅಜ್ಜಯ್ಯ, ಕೆ.ಅಣ್ಣಾನಾಯ್ಕ, ಕೆ.ಚಂದ್ರಶೇಖರಪ್ಪ, ಆರ್.ಲೀಲಾವತಿ, ಮಹಮ್ಮದ್ ಇಸ್ಮಾಯಿಲ್, ಎಚ್.ಜಿ.ಪ್ರಸನ್ನಕುಮಾರ್, ಎಲ್.ಸಿ.ಪುಟ್ಟಸ್ವಾಮಿ, ಆರ್.ರವಿ, ಕೆ.ವಿ.ಶಿವಣ್ಣ, ಸ್ವಾಮಿ, ಹರೀಶ್ ಕುಮಾರ್, ಮರುಳ ಸಿದ್ದಯ್ಯ ಉಪಸ್ಥಿತರಿದ್ದರು.