ಸ್ಕಾನಿಂಗ್​ ಸೆಂಟರ್​ಗಳ ದಾಖಲಾತಿ ನಿರ್ವಹಣೆ ಕಡ್ಡಾಯ, ಡಿಎಚ್​ಒ ಡಾ.ಟಿ.ಲಿಂಗರಾಜು ಸೂಚನೆ

PCand PNDT act review meeting DHO Koppal Lingaraju
Dr.T.LINGARAJU
Published on

ಕೊಪ್ಪಳ: ಜಿಲ್ಲೆಯಲ್ಲಿನ ಎಲ್ಲ ಸ್ಕಾನಿಂಗ್​ ಸೆಂಟರ್​ಗಳಲ್ಲಿ ಕಡ್ಡಾಯವಾಗಿ ಾರಂ ಎ್​ ಸೇರಿ ಅಗತ್ಯ ದಾಖಲೆಗಳ ನಿರ್ವಹಣೆ ಕಡ್ಡಾಯ ಎಂದು ಡಿಎಚ್​ಒ ಡಾ.ಟಿ.ಲಿಂಗರಾಜು ಹೇಳಿದರು.

ನಗರದ ಡಿಎಚ್​ಒ ಕಚೇರಿ ಸಭಾಂಗಣದಲ್ಲಿ ಪಿ.ಎನ್​.ಡಿ.ಟಿ ಕಾಯ್ದೆ ಮತ್ತು ಎಂ.ಟಿ.ಪಿ ಕಾಯ್ದೆಯಡಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಲ್ಲ ಸ್ಕಾನಿಂಗ್​ ಸೆಂಟರ್​ಗಳು ಪಿಸಿ, ಪಿಎನ್​ಡಿಟಿ ಕಾಯ್ದೆಯಡಿ ನೋಂದಣಿ ಮಾಡಿಕೊಳ್ಳಬೇಕು. ಅವಧಿ ಮುಗಿವ ಮೂರು ತಿಂಗಳ ಮುಂಚಿತವಾಗಿ ನವೀಕರಣ ಮಾಡಿಕೊಳ್ಳಬೇಕು. ಸ್ಕಾನಿಂಗ್​ ನಿಯಮ ಪಾಲಿಸಿ, ದಾಖಲೆ ನಿರ್ವಹಿಸಿ. ನೋಂದಣಿ, ಪರವಾನಗಿ ನವೀಕರಣವಿಲ್ಲದ ಆರೋಗ್ಯ ಸಂಸ್ಥೆಗಳ ಮೇಲೆ ಹಾಗೂ ನಿಗದಿತ ನಿಯಮ ಪಾಲನೆ ಹಾಗೂ ದಾಖಲಾತಿಗಳನ್ನು ನಿರ್ವಹಿಸದ ಆರೋಗ್ಯ ಸಂಸ್ಥೆಗಳನ್ನು ಮುಚ್ಚಿಸಲು ಅಥವಾ ಸ್ಥಗಿತಗೊಳಿಸಲು ಕಾಯ್ದೆಯಡಿ ಅವಕಾಶವಿದೆ ಎಂದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರನಾಥ್​ ಎಂ.ಎಚ್​ ಮಾತನಾಡಿ, ಪಿ.ಸಿ ಮತ್ತು ಪಿ.ಎನ್​.ಡಿ.ಟಿ ಕಾಯ್ದೆ ಅನುಸಾರ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧಿಸಲಾಗಿದೆ. ಯಾವುದೇ ವೈದ್ಯರು ಇದರಲ್ಲಿ ಭಾಗಿಯಾದರೆ ಶಿೆ ಜತೆಗೆ ದಂಡ ವಿಧಿಸಲು ಅವಕಾಶವಿದೆ. ಗರ್ಭಿಣಿ ಕುಟುಂಬದವರು ವೈದ್ಯರಿಗೆ ಒತ್ತಾಯಿಸಿದಲ್ಲಿ ಅವರನ್ನು ಶಿೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲೆಯ ವಿವಿಧ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳ ನೋಂದಣಿ, ನವೀಕರಣ ಹಾಗೂ ಹೊಸ ಅರ್ಜಿಗಳಿಗೆ ಅನುಮತಿ ಕುರಿತಂತೆ ಚರ್ಚಿಸಲಾಯಿತು.

ಸಮಿತಿ ಸದಸ್ಯರಾದ ಸರೋಜಾ ಬಾಕಳೆ, ಡಾ.ಗಿರೀಶ್​ ಹಾಗೂ ಡಾ.ಶ್ರೀನಿವಾಸ ಹ್ಯಾಟಿ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net