ಸ್ಕೂಟರ್‌ಗೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

Accident
Published on

ಮೈಸೂರು: ತಿ.ನರಸೀಪುರ ರಸ್ತೆಯ ದುದ್ದಗೆರೆ ಬಳಿ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದು ಪತ್ನಿ ಸಾವಿಗೀಡಾಗಿದ್ದು, ಪತಿ ಗಾಯಗೊಂಡಿದ್ದಾರೆ.

ನಿಮಿಷಾಂಬ ಬಡಾವಣೆ ನಿವಾಸಿ ಯಶೋದಮ್ಮ(45) ಮತರು. ಇವರ ಪತಿ ನಾಗರಾಜ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಾಗರಾಜ್ ಅವರು ಪತ್ನಿಯೊಂದಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ದುದ್ದುಗೆರೆ ಬಳಿ ವೇಗವಾಗಿ ಬಂದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.

ಇದರಿಂದ ಇಬ್ಬರು ನೆಲಕ್ಕೆ ಬಿದ್ದಿದ್ದಾರೆ. ಕೂಡಲೇ ಸಾರ್ವಜನಿಕರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಯಶೋದಮ್ಮ ಅವರು ಮತಪಟ್ಟಿದ್ದರು.

ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net