ಸ್ಕೂಟಿಯಿಂದ ಬಿದ್ದು ಸವಾರ ಸಾವು

accident-15
Published on

ಹಾಸನ: ಸ್ಕೂಟಿ ಸ್ಕಿಡ್ ಆಗಿ ಬಿದ್ದು ಸವಾರ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಚಂದ್ರಪ್ಪ (70) ಮೃತ.ಗ್ರಾಮದ ತಮ್ಮ ತೋಟಕ್ಕೆ ಹೋಗಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸ್ ಹೋಗುತ್ತಿದ್ದ ವೇಳೆ ಸ್ಕೂಟಿ ಸ್ಕಿಡ್ ಆಗಿ ಕೆಳಗೆ ಬಿದ್ದ ಪರಿಣಾಮ ತಲೆಗೆ ತೀವ್ರ ಸ್ವರೂಪದ ಪೆಟ್ಟಾಗಿ ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಅವರನ್ನು ಚಿಕಿತ್ಸೆಗೆಂದು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net