ಸ್ಕೇಟಿಂಗ್ ವಿದ್ಯಾರ್ಥಿಗಳಿಂದ ಮ್ಯಾರಥಾನ್

26Rajesh18
Published on

ಚಾಮರಾಜನಗರ: 76ನೇ ಗಣರಾಜ್ಯೋತ್ಸವದ ಅಂಗವಾಗಿ ನಗರದಲ್ಲಿ ರೆಹ್ಬರ್ ಅಸೋಸಿಯೇಷನ್ ವತಿಯಿಂದ ಭಾನುವಾರ ಸ್ಕೇಟಿಂಗ್ ಕ್ರೀಡಾಪಟುಗಳಿಂದ ಮ್ಯಾರಥಾನ್ ನಡೆಯಿತು.

ನಗರದ ಸುಲ್ತಾನ್ ಷರೀಫ್ ವೃತ್ತದಲ್ಲಿ ಮ್ಯಾರಥಾನ್‌ಗೆ ಚಾಲನೆ ನೀಡಿದ ಜಿಲ್ಲಾ ನೆಟ್‌ಬಾಲ್ ಅಸೋಸಿಯೇಷನ್ ಗೌರವಾಧ್ಯಕ್ಷೆ ನರ್ಗಿಸ್ ಭಾನು ಮಾತನಾಡಿ, ಮೊಬೈಲ್, ಸಾಮಾಜಿಕ ಜಾಲತಾಣಗಳ ಪ್ರಭಾವಕ್ಕೆ ಒಳಗಾಗಿರುವ ಮಕ್ಕಳ ನಡುವೆ ಸ್ಕೇಟಿಂಗ್ ನಂತಹ ಕ್ರೀಡಾಕೂಟದಲ್ಲಿ ಹಲವಾರು ವಿದ್ಯಾರ್ಥಿಗಳು ಮ್ಯಾರಥಾನ್‌ನಲ್ಲಿ ಭಾಗವಹಿಸಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಚುಡಾ ಅಧ್ಯಕ್ಷ ಮಹಮದ್ ಅಸ್ಗರ್(ಮುನ್ನಾ) ಮಾತನಾಡಿ, ಗ್ರಾಮೀಣ ಕ್ರೀಡಾಕೂಟಗಳು ಚಾಮರಾಜನಗರದಲ್ಲಿ ಆಯೋಜನೆಗೊಳ್ಳುತ್ತಿರುವುದು ಸಂತಸದ ಸಂಗತಿ, ಸ್ಕೇಟಿಂಗ್, ಕರಾಟೆ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.

ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ಅಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ಮಾತನಾಡಿ, ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸ್ಕೇಟಿಂಗ್, ಕರಾಟೆ ಕ್ರೀಡಾಂಗಣ ನಿರ್ಮಿಸಬೇಕೆಂದು ಆಗ್ರಹಿಸಿದರು

ಚಾಮರಾಜನಗರ ಸುಲ್ತಾನ್ ಷರೀಫ್ ವೃತ್ತದಿಂದ ಆರಂಭವಾದ ಸ್ಕೇಟಿಂಗ್ ಮ್ಯಾರಥಾನ್ ದೊಡ್ಡಂಗಡಿ ಬೀದಿ, ಅಗ್ರಹಾರ ಬೀದಿ, ಡಿವಿಯೇಷನ್ ರಸ್ತೆ, ಸುಲ್ತಾನ್ ಷರೀಫ್ ವೃತ್ತದಲ್ಲಿ ಮುಕ್ತಾಯಗೊಂಡಿತು. ರೆಹ್ಬರ್ ಅಸೋಸಿಯೇಷನ್ ಅಧ್ಯಕ್ಷ ಪುರ್ಕಾನ್ ಪಾಷಾ ಅಜೀಂ ಮತ್ತು ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net