ಸ್ಕೌಟ್ಸ್ ಗೈಡ್ಸ್‌ನಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು

18-07-Shiva-2
Published on

ರಾಯಚೂರು
ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸೇವಾ ಮನೋಭಾವ ಬೆಳೆಯಲು ಸಾಧ್ಯವಾಗುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಶೇಖರಪ್ಪ ಹೊಕ್ರಾಣಿ ಹೇಳಿದರು.
ಸ್ಥಳೀಯ ವೀರಶೈವ ಕಲ್ಯಾಣ ಮಂಟಪದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪಿಯು ಕಾಲೇಜುಗಳ ರೋವರ್ ಸ್ಕೌಟ್ ಲೀಡರ್ ಮತ್ತು ರೇಂಜರ್ ಲೀಡರ್ ಹಾಗೂ ಉಪನ್ಯಾಸಕರಿಗಾಗಿ ಮಂಗಳವಾರ ಏರ್ಪಡಿಸಿದ್ದ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಬ್ರಿಟಿಷ್ ಸೇನಾ ಅಕಾರಿ ರಾಬರ್ಟ್ ಬೇಡನ್ ಪಾವೆಲ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾಗಿದ್ದು, ಭಾರತದಲ್ಲಿ 1909ರಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ದೇಶದಲ್ಲಿ ಆರಂಭವಾಯಿತು. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮೂಡಿಸುವ ನಿಟ್ಟಿನಲ್ಲಿ ಸಂಸ್ಥೆ ಮುಂಚೂಣಿಯಲ್ಲಿದೆ ಎಂದು ಹೇಳಿದರು.
ಸಂಸ್ಥೆಯ ಪ್ರಭಾರಿ ಜಿಲ್ಲಾ ಮುಖ್ಯ ಆಯುಕ್ತ ಬಸವರಾಜ ಬೋರೆಡ್ಡಿ, ಜಂಟಿ ಕಾರ್ಯದರ್ಶಿ ಬಿ.ವಿ.ರಾಮಲತಾ, ಡಾ.ಭರಶೆಟ್ಟಿ, ಗುರುಮೂರ್ತಿ, ಲತಾ ಮಂಜುನಾಥ, ರೂಪಾಲಿ ರಾಥೋಡ್, ಸಂತೋಷ ಹುಗ್ಗಿ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆ ಜಿಲ್ಲಾ ಕಾರ್ಯದರ್ಶಿ ಬಸವರಾಜ ಗದಗಿನ, ಪದಾಕಾರಿಗಳಾದ ದಾನಮ್ಮ, ಆರ್.ಸುಧಾ, ಆರ್.ಎಚ್.ಸಾಗರ್, ಎನ್.ಶೇಖರ್, ರಾಜಶ್ರೀ ಸಜ್ಜನ್, ಅಂಬಣ್ಣ ಮ್ಯಾಕಲ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net