

ಬೇಲೂರು: ತಾಲೂಕಿನ ನಾರ್ವೆ ಜೆಎಸ್‌ಎಸ್ ಪ್ರೌಢಶಾಲೆಯ ಸ್ಕೌಟ್ಸ್ ಘಟಕದಿಂದ ಶನಿವಾರ ರಸ್ತೆ ಸುರಕ್ಷತಾ ಸಪ್ತಾಹ, ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಹಾಗೂ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿ ಘೋಷಣೆ ಕೂಗುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.
ಹೆಲ್ಮೆಟ್ ಇಲ್ಲದೆ ಬೈಕ್ ಚಲಾಯಿಸುತ್ತಿದ್ದ ಸವಾರರಿಗೆ ರಸ್ತೆ ಸುರಕ್ಷತಾ ಸಪ್ತಾಹದ ಬಗ್ಗೆ ತಿಳಿಸಿದರು. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಹಾಗೂ ವಿವೇಕಾನಂದರ ಜನ್ಮ ದಿನಾಚರಣೆ ಬಗ್ಗೆಯೂ ಜನಸಾಮಾನ್ಯರಿಗೆ ಮಾಹಿತಿ ನೀಡಿದರು.
ಈ ಸಂದರ್ಭ ನಾರ್ವೆ ಜೆಎಸ್‌ಎಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಲೋಕೇಶ್, ಸ್ಕೌಟ್ಸ್ ಘಟಕದ ಅಧಿಕಾರಿ ಪುಟ್ಟರಾಜು, ಉಮೇಶ್, ಲಕ್ಷ್ಮಣ ಸೇರಿದಂತೆ ಇತರರು ಭಾಗವಹಿಸಿದ್ದರು.