ಸ್ಕೌಟ್ಸ್ ಮತ್ತು ಗೈಡ್ಸ್ ದಿನಾಚರಣೆ

03-GPT-2
ಗುಂಡ್ಲುಪೇಟೆಯ ಊಟಿ ಪ್ರೈಮರಿ ಶಾಲೆಯ ಆವರಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ದಿನಾಚರಣೆ ಅಂಗವಾಗಿ ಜಾಥಾ ಆಯೋಜಿಸಲಾಗಿತ್ತು. ಡಾ.ಸರೋಜ, ರಾಮಚಂದ್ರ, ರಾಜಶೇಖರ್, ಅನ್ನಪೂರ್ಣಮ್ಮ, ಪರಿಮಳಾ ಇತರರು ಇದ್ದರು.
Published on

ಗುಂಡ್ಲುಪೇಟೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಸಂಸ್ಥೆ ವತಿಯಿಂದ ಸಂಸ್ಥಾಪಕರ ದಿನಾಚರಣೆ, ವಿಶ್ವ ಭ್ರಾತೃತ್ವ ದಿನಾಚರಣೆ ಹಾಗೂ ತಾಲೂಕು ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ದಿನಾಚರಣೆ ನಡೆಯಿತು.

ಪಟ್ಟಣದ ಊಟಿ ಪ್ರೈಮರಿ ಶಾಲೆಯ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಸರೋಜಾ ಧ್ವಜಾರೋಹಣ ಮಾಡಿದರು. ಜಿಲ್ಲಾ ಕಾರ್ಯದರ್ಶಿ ರಾಮಚಂದ್ರ ಜಾಥಾಕ್ಕೆ ಚಾಲನೆ ನೀಡಿದರು. ನಂತರ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ್ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಿದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಂಜಣ್ಣ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಕಾರ್ಯದರ್ಶಿ ಅನ್ನಪೂರ್ಣಮ್ಮ, ಜಿಲ್ಲಾ ಸಂಘಟಕ ಅಶೋಕ್‌ಕುಮಾರ್, ತಾಲೂಕು ಪದಾಧಿಕಾರಿಗಳಾದ ಪರಿಮಳ, ಗುರುಮಲ್ಲೇಶ್, ನಂದೀಶ್, ಪೊನ್ನರಾಜ್ ಗೌರಮ್ಮ, ಆಂಜೆನೇಯ ಜ್ಯೋತಿಪ್ರಸಾದ್, ಶಿವಸ್ವಾಮಿ, ಸರಸ್ವತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net