ಸ್ಟಾಫ್ ನರ್ಸ್ ಆತ್ಮಹತ್ಯೆ

Published on

ಮೈಸೂರು: ಅರಿವಳಿಕೆ ಇಂಜೆಕ್ಷನ್ ತೆಗೆದುಕೊಂಡು ಸ್ಟಾಫ್ ನರ್ಸ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಮಹಮ್ಮದ್ ಸೇಠ್ ಬ್ಲಾಕ್‌ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶೈಲಜಾ (23) ಆತ್ಮಹತ್ಯೆ ಮಾಡಿಕೊಂಡವರು.
ಗುಂಡುಪ್ಲೇಟೆ ತಾಲೂಕು ಬೆಟ್ಟದಪುರದ ಶೈಲಜಾ ಅವರು ಐದು ವರ್ಷದಿಂದ ನರ್ಸ್ ಅಗಿ ಸೇವೆ ಸಲ್ಲಿಸುತ್ತಿದ್ದರು. ಆಸ್ಪತ್ರೆ ಬಳಿ ಇರುವ ಮಹಿಳಾ ಪಿಜಿಯಲ್ಲಿ ಉಳಿದುಕೊಂಡಿದ್ದ ಅವರು, ಇತ್ತೀಚೆಗೆ ಖಿನ್ನತೆಗೆ ಒಳಗಾಗಿದ್ದರೆನ್ನಲಾಗಿದೆ. ಲಷ್ಕರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net