ಸ್ತ್ರೀ ಪ್ರವೇಶದಿಂದ ಬದಲಾವಣೆ ಸಾಧ್ಯ

bkt-13-1
ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್‌ನಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಸಂಸದ ಪಿ.ಸಿ.ಗದ್ದಿಗೌಡರ ಉದ್ಘಾಟಿಸಿದರು.
Published on

ಬಾಗಲಕೋಟೆ: ಸರ್ಕಾರ ಮಹಿಳೆಯರಿಗೂ ಸಹ ಸಮಾನ ಅವಕಾಶ ಕಲ್ಪಿಸಿದ್ದರಿಂದ ಇಂದು ಪ್ರತಿಯೊಂದ ಕ್ಷೇತ್ರದಲ್ಲಿಯೂ ಬದಲಾವಣೆ ನೋಡುತ್ತಿದ್ದೇವೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್‌ನಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸನಾತನ ಕಾಲದಿಂದಲೂ ಸ್ತ್ರೀಯರಿಗೆ ಗೌರವ ಕೊಡಲಾಗುತ್ತಿದ್ದು, ಭಾರತ ದೇಶದಲ್ಲಿ ಸ್ತ್ರೀಯರಿಗೆ ಪೂಜ್ಯ ಸ್ಥಾನವಿದೆ. ತಾಯಿಯಾಗಿ, ಸಹಯೋದರಿಯಾಗಿ, ಪತ್ನಿಯಾಗಿ ಕುಟುಂಬ ನಿರ್ವಹಿಸುವದರ ಜೊತೆಗೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರಿತಿಸಿಕೊಂಡಿದ್ದಾಳೆ. ಇದನ್ನು ಗಮನಿಸಿದಾಗ ಸ್ತ್ರೀ ಅಬಲೆಯಲ್ಲ ಸಬಲೆ ಎನ್ನುವ ಮಾತು ದಿಟವಾಗಿದೆ ಎಂದರು.

ಇಂದು ಪ್ರತಿ ಕ್ಷೇತ್ರದಲ್ಲಿಯೂ ಅಡುಗೆ ಮನೆಗೆ ಸೀಮಿತರಾಗಿದ್ದ ಮಹಿಳೆ ಇಂದು ಅಂತರೀಕ್ಷಾ ಮಟ್ಟದಲ್ಲಿ ಸಾಧನೆ ಮಾಡುತ್ತಿದ್ದಾಳೆ. ಸ್ತ್ರೀಶಕ್ತಿ ಅಮೋಘವಾಗಿದೆ. ಇಂದು ಅನೇಕ ಕ್ಷೇತ್ರಗಳಲ್ಲಿ ದಾಪುಗಾಲು ಇಡುತ್ತಿರುವದರಿಂದ ಅವರಲ್ಲಿರುವ ಕತೃತ್ವ ಶಕ್ತಿ ಇಮ್ಮಡಿಗೊಂಡಿದೆ. ಸರ್ಕಾರ ಮಹಿಳೆಯರಿಗಾಗಿಗೇ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಶಿಕ್ಷಣ ಪಡೆಯುವ ಮೂಲಕ ಎಲ್ಲ ಕ್ಷೇತ್ರಗಳಲ್ಲಿ ಕೆಲಸ ಮಾಡುವಂತಾಗಬೇಕು. ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರವು ಪ್ರಮುಖವಾಗಿದೆ ಎಂದು ಹೇಳಿದರು.

ಶಾಸಕ ಡಾ.ವೀರಣ್ಣ ಚರಂತಿಮಠ ಮಾತನಾಡಿ, ಪ್ರತಿಯೊಂದು ಕ್ಷೇತ್ರಗಳಲ್ಲಿ ಮಹಿಳೆಯರು ಕೆಲಸ ಮಾಡುತ್ತಿರುವುದನ್ನು ನೋಡುತ್ತಿದ್ದೇವೆ. ಅಡುಗೆ ಕೆಲಸದಿಂದ ಹಿಡಿದು ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ತಮೀಳುನಾಡಿನ ಟೋಲ್ ನಾಕಾದಲ್ಲಿಯೂ ಮಹಿಳೆ ಕೆಲಸ ಮಾಡುತ್ತಿದ್ದಾರೆ.ಅಯೋದ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸ್ಥಳದಲ್ಲಿ ಪ್ರತಿಯೊಂದು ಸ್ಥಳಲ್ಲಿ ಭದ್ರತಾ ಸಿಬ್ಬಂದಿ ಕಾಣುತ್ತಿದ್ದೇವೆ. ಇವುಗಳನ್ನೇಲ್ಲಾ ನೋಡಿದಾಗ ಪುರುಷರಿಗೆ ಸಮಾನಾದ ಕೆಲಸ ಮಹಿಳೆಯೂ ಕೂಡಾ ಮಾಡುತ್ತಿದ್ದಾಳೆ ಎಂದರು.
ಬುಡಾ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಟಿ.ಭೂಬಾಲನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಮರಟ್ಟಿ, ಡಿವೈಪಿಸಿಯ ಜಿಲ್ಲಾ ಉಪ ಸಮನ್ವಯಾಽಕಾರಿ ಜಾಸ್ಮೀನ್ ಕಿಲ್ಲೇದಾರ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಗುರಮ್ಮ ಸಂಕೀನ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net