ಸ್ತ್ರೀ ರೋಗ ತಜ್ಞರ ನಿಯೋಜಿಸಿ

27KMP 02
Published on

ಕಂಪ್ಲಿ: ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ತ್ರೀ ರೋಗ ತಜ್ಞರನ್ನು ನಿಯೋಜಿಸಬೇಕೆಂದು ಆಗ್ರಹಿಸಿ ಶಿರಸ್ತೇದಾರ್ ಎಸ್.ಡಿ.ರಮೇಶ್‌ಗೆ ಕಂಪ್ಲಿ ನಗರಾಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ಸೋಮವಾರ ಸೋಮವಾರ ಮನವಿ ಸಲ್ಲಿಸಿದರು.

ಸಮಿತಿ ಅಧ್ಯಕ್ಷ ಕೃಷ್ಣ ಎಸ್.ಪೋಳ ಮಾತನಾಡಿ, ಕಳೆದ ಒಂದು ತಿಂಗಳಿಂದ ಸ್ತ್ರೀ ರೋಗ ತಜ್ಞರು ಇಲ್ಲದ್ದರಿಂದ ಗರ್ಭಿಣಿಯರು ಹೆರಿಗೆಗಾಗಿ ಗಂಗಾವತಿ ಸೇರಿದಂತೆ ಇತರೆಡೆ ತೆರಳಬೇಕಿದೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ಗರ್ಭಿಣಿಯರಿಗೆ ತೊಂದರೆಯಾಗುತ್ತಿದೆ. ಕೂಡಲೇ ಸ್ತ್ರೀ ರೋಗ ತಜ್ಞರನ್ನು ನೇಮಕಗೊಳಿಸುವಂತೆ ಒತ್ತಾಯಿಸಿದರು. ಪ್ರಮುಖರಾದ ಟಿಎಚ್‌ಎಂ ರಾಜಕುಮಾರ್, ಕೆ.ನಾರಾಯಣ, ಕಪ್ಪಗಲ್ ವೀರೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net