ಸ್ತ್ರೀ ಶಕ್ತಿ ಸಂಘದ ಸದಸ್ಯರಿಂದ ಮತದಾನ ಜಾಗೃತಿ ಕಾರ್ಯಕ್ರಮ

ಸ್ತ್ರೀ ಶಕ್ತಿ ಸಂಘದ ಸದಸ್ಯರಿಂದ ಮತದಾನ ಜಾಗೃತಿ ಕಾರ್ಯಕ್ರಮ
Published on

ಹಾಸನ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶೇಕಡವಾರು ಮತದಾನ ಪ್ರಮಾಣ ಹೆಚ್ಚು ಮಾಡುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಕಾಲ್ನಡಿಗೆ ಜಾಥದ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

ಅರಸೀಕೆರೆ ತಾಲ್ಲೂಕಿನ ಗಂಡಸಿ ಹ್ಯಾಂಡ್ ಪೋಸ್ಟ್‌ನಲ್ಲಿ ಸ್ತ್ರೀ ಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಯಿಂದ ಕಡ್ಡಾಯ ಮತದಾನ ಜಾಗೃತಿ ಜಾಥ ಹಾಗೂ ಮಾನವ ಸರಪಳಿ ಮತ್ತು ನೈತಿಕ ಮತದಾನದ ಬಗ್ಗೆ ಘೋಷಣೆಗಳನ್ನು ಕೂಗುವ ಮೂಲಕ ಕಡ್ಡಾಯ ಮತದಾನ ಮಾಡುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಅರಸೀಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ನಾಗರಾಜ್, ಸಹಾಯಕ ನಿರ್ದೇಶಕರಾದ (ನರೇಗಾ) ವಿನಯ್ ಕುಮಾರ್, ಅರಸೀಕೆರೆ ತಾಲ್ಲೂಕು ವೈದ್ಯಾಧಿಕಾರಿ ತಿಮ್ಮಯ್ಯ, ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net