ಸ್ಥಳದಲ್ಲಿಯೇ ಕೆಲ ಸಮಸ್ಯೆಗಳಿಗೆ ಪರಿಹಾರ

26 YERRISWAMY 03..
Published on

ಬಳ್ಳಾರಿ ; ರಾಜ್ಯ ಸರ್ಕಾರ ರೂಪಿಸಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಅಹವಾಲುಗಳಿದ್ದಲ್ಲಿ ಸಲ್ಲಿಸಿ, ಪರಿಹಾರ ಕಂಡುಕೊಳ್ಳಬಹುದು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಹೇಳಿದರು.
ಇಲ್ಲಿನ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿನ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಸ್ಯೆಗಳಿರುವ ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ, ಇದರ ಸದುಪಯೋಗಪಡೆದುಕೊಳ್ಳಬೇಕು. ಜನತಾದರ್ಶನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಿ, ಕೂಲಂಕುಶವಾಗಿ ಪರಿಶೀಲಿಸಿ, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಡನೆ ಚರ್ಚಿಸಿ, ತ್ವರಿತವಾಗಿ ಪರಿಹಾರ ನೀಡಲಾಗುವುದು ಎಂದರು. ಉತ್ಸುಕರಾಗಿಯೇ ಸಾರ್ವಜನಿಕ ಅಹವಾಲು ಸ್ವೀಕಾರ ಮಾಡಿದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸಿ ಪರಿಹಾರ ನೀಡಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಒಟ್ಟು 27 ಅರ್ಜಿ ಸಲ್ಲಿಕೆ : ಕಂದಾಯ 17, ಭೂ ಮಾಪನ ಇಲಾಖೆ 03, ಪಾಲಿಕೆ 02, ಜಿಪಂ 03, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಉಪವಿಭಾಗ 01, ತಾಪಂ 01 ಸೇರಿದಂತೆ ಒಟ್ಟು 27 ಅರ್ಜಿ ಸ್ವೀಕಾರಗೊಂಡವು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net