ಸ್ಥಳದಲ್ಲೇ ಗುರುತಿನ ಚೀಟಿ, ಪಿಂಚಣಿ ಸೌಲಭ್ಯ ಮಂಜೂರಿಗೆ ಕ್ರಮ

CTD 12 HIRIYA NAGARAIKA (7)--05
Published on

ಚಿತ್ರದುರ್ಗ: ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಸಕಾಲ ಯೋಜನೆ ಮೂಲಕ ಹಲವು ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು ಎಡಿಸಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಜಿಲ್ಲಾಡಳಿತ, ಜಿಪಂ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಂಯುಕ್ತಾಶ್ರ ಯದಲ್ಲಿ ಮಂಗಳವಾರ ನಗರದ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ‘ ಇಂದೇ ಸಕಾಲ’ಘೋಷಣೆಯಡಿ ಏರ್ಪಡಿ ಸಿದ್ದ ಹಿರಿಯ ನಾಗರಿಕರ ಗುರು ತಿನ ಚೀಟಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆರವತ್ತು ವರ್ಷ ಪೂರೈಸಿದ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ನೀಡಲಾಗುತ್ತಿದೆ. ಕಂದಾಯ ಇಲಾಖೆ ಸಹಯೋಗದೊಂದಿಗೆ ವೃದ್ಧಾಪ್ಯ ವೇತನ, ಸಂಧ್ಯಾಸುರಕ್ಷಾ ಮತ್ತಿತರ ಸಾಮಾಜಿಕ ಭದ್ರತಾ ಯೋಜನೆಗಳ ಪಿಂಚಣಿ ಹಾಗೂ ಗುರುತಿನ ಚೀಟಿಯನ್ನು ಸ್ಥಳದಲ್ಲಿಯೇ ಮಂಜೂರು ಮಾಡಿ ವಿತರಿಸಲು ಕ್ರಮ ವಹಿಸಲಾಗುವುದು ಎಂದರು.
ಹಿರಿಯ ನಾಗರಿಕರ ಗುರುತಿನ ಚೀಟಿ ಸೌಲಭ್ಯದಿಂದ ಬಸ್ ಪ್ರಯಾಣದಲ್ಲಿ ರಿಯಾಯಿತಿ ಹಾಗೂ ಆದಾಯ ತೆರಿಗೆಯಲ್ಲಿ ಕೆಲವು ವಿನಾಯಿತಿ ದೊರೆಯಲಿದೆ. ಕಚೇರಿ ಅಲೆದಾಟ ಹಾಗೂ ಮಧ್ಯವರ್ತಿಗಳ ಹಾವಳಿಯ ತೊಂದರೆ ತಪ್ಪಿಸಲು ಒಂದೇ ದಿನದಲ್ಲಿ 40 ಮಂದಿ ಹಿರಿಯರಿಗೆ ಗುರುತಿನ ಚೀಟಿ ವಿತರಿಸಲಾಗಿದೆ ಎಂದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎಂ.ವಿ.ವೀಣಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಪವಿತ್ರಾ, ಹಿರಿಯ ನಾಗರಿಕರ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಂಗಪ್ಪರೆಡ್ಡಿ, ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ರಶ್ಮಿ, ಸಕಾಲ ಜಿಲ್ಲಾ ಸಂಯೋಜಕ ಎಂ. ಆದರ್ಶ, ಬಸವೇಶ್ವರ ವಿದ್ಯಾಲಯ ಕಾರ‌್ಯದರ್ಶಿ ಶಂಕರಪ್ಪ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net