ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕಿರಣ್ ಶಂಕ್ರಿ

news
ಹೊಸಪೇಟೆ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕಿರಣ್ ಶಂಕ್ರಿ ಆಯ್ಕೆಯಾದರು.
Published on

ಹೊಸಪೇಟೆ: ಇಲ್ಲಿನ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ 18ನೇ ವಾರ್ಡ್ನ ಸದಸ್ಯ ಕಿರಣ್ ಶಂಕ್ರಿ ಆಯ್ಕೆಯಾದರು.

ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಇಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಕಿರಣ್ ಶಂಕ್ರಿ ಅವರ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಲಾಯಿತು. ನಡೆದ ಚುನಾವಣೆಯಲ್ಲಿ 7 ಮಂದಿ ಸದಸ್ಯರು ಆಯ್ಕೆಯಾದರು. ಈ ಸದಸ್ಯರೆಲ್ಲಾ ಸೇರಿ ಕಿರಣ್ ಶಂಕ್ರಿ ಅವರನ್ನು ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಅವಿರೋಧ ಆಯ್ಕೆ ಮಾಡಿದರು.

ನಗರಕ್ಕೆ ಸಮರ್ಪಕ ಕುಡಿಯುವ ನೀರಿನ ಪೂರೈಕೆ, ರಸ್ತೆ ಮತ್ತು ಚರಂಡಿಗಳ ನಿರ್ಮಾಣ ಸೇರಿದಂತೆ ನಗರದ ಅಭಿವೃದ್ಧಿಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರ ಸಮಸ್ಯೆಗೆ ಸ್ಪಂದಿಸುತ್ತೇನೆ ಎಂದು ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಶಂಕ್ರಿ ಭರವಸೆ ನೀಡಿದರು.

ಉಪಾಧ್ಯಕ್ಷ ರಮೇಶ್ ಗುಪ್ತ, ಪೌರಾಯುಕ್ತ ಸಿ.ಚಂದ್ರಪ್ಪ, ಸದಸ್ಯರಾದ ಜಂಬುನಾಥ, ಆನಂದ್, ಬುಜ್ಜಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net