ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ ಸಹಕಾರಿ

APR 13-HRP-01
Published on

ಹರಪನಹಳ್ಳಿ: ನಿರಂತರ ಪರಿಶ್ರಮದೊಂದಿಗೆ ಬುದ್ಧಿವಂತಿಕೆಯಿಂದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿದರೆ ಸುಲಭವಾಗಿ ಯಶಸ್ಸು ಗಳಿಸಲು ಸಾಧ್ಯವೆಂದು ಬಿಜೆಪಿ ಮಂಡಲ ಕಾರ್ಯದರ್ಶಿ ಜವಳಿ ಮಹೇಶ್ ತಿಳಿಸಿದರು.

ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ‘ವಿಜಯವಾಣಿ ವಿದ್ಯಾರ್ಥಿ-ಉದ್ಯೋಗ ಮಿತ್ರ ಪ್ರತಿಗಳನ್ನು ವಿತರಿಸಿ ಭಾನುವಾರ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳಲು ಸಾಕಷ್ಟು ಪರಿಶ್ರಮ ಹಾಕಬೇಕಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಪ್ರತಿಭಾವಂತ ವಿದ್ಯಾರ್ಥಿಗಳಿದ್ದರೂ ಸ್ಪರ್ಧಾತ್ಮಕ ತಯಾರಿಗೆ ಸೌಲಭ್ಯವಿಲ್ಲದ ಕಾರಣ ತಯಾರಿ ಮೊಟಕುಗೊಳಿಸುತ್ತಿದ್ದಾರೆ ಎಂದರು.

ಯಾವುದೇ ಕಾರಣಕ್ಕೂ ಗುರಿಯಿಂದ ವಿಮುಖರಾಗದೆ ದೃಢ ಚಿತ್ತದಿಂದ ಪರೀಕ್ಷೆ ತಯಾರಿಸಿ ನಡೆಸಬೇಕು. ವಿಜಯವಾಣಿ ವಿದ್ಯಾರ್ಥಿ-ಉದ್ಯೋಗ ಮಿತ್ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತುಂಬಾ ಸಹಕಾರಿಯಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ನಿತ್ಯ ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿದ್ದು, ಉಪಯೋಗ ಪಡೆದುಕೊಳ್ಳಿ ಎಂದು ಜವಳಿ ಮಹೇಶ್ ತಿಳಿಸಿದರು.

ಗ್ರಂಥಾಲಯ ಶಾಖಾಧಿಕಾರಿ ನಾರಾಯಣ್ ದಾಸ್ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ವಿಜಯವಾಣಿ ವಿದ್ಯಾರ್ಥಿ-ಉದ್ಯೋಗ ಮಿತ್ರ ಪ್ರತಿಗಳನ್ನು ಉಚಿತವಾಗಿ ನೀಡಲು ಮುಂದಾಗಿರುವ ಜವಳಿ ಮಹೇಶ್ ಅವರ ಕಾರ್ಯ ಶ್ಲಾಘನೀಯ ಎಂದರು.

ನೌಕರಿ ಪಡೆದ ನಂತರ ಸಮಾಜದ ಕಷ್ಟ-ಸುಖಗಳಿಗೆ ಸ್ಪಂದಿಸುವ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಸಾಕಷ್ಟು ವಿದ್ಯಾರ್ಥಿಗಳಿಗೆ ಓದಲು ಪುಸ್ತಕಗಳು ಇರುವುದಿಲ್ಲ. ಇದನ್ನು ಅರಿತು ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ಒದಗಿಸಿದ್ದು, ಅವುಗಳನ್ನು ಸರಿಯಾಗಿ ಬಳಸಿಕೊಳ್ಳಿ ಎಂದು ನಾರಾಯಣ್ ದಾಸ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net