ಸ್ಪರ್ಧಾತ್ಮಕ ಪರೀಕ್ಷೆ ಮಾಹಿತಿ ತಿಳಿದುಕೊಳ್ಳಿ

MAR 17-HRP-01
Published on

ಹರಪನಹಳ್ಳಿ: ಜೀವನ ಕಟ್ಟಿಕೊಳ್ಳುವಲ್ಲಿ ಪರೀಕ್ಷೆಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಜ್ಞಾನದೀಪ ನವೋದಯ ಕೋಚಿಂಗ್ ಸೆಂಟರ್ ಸಂಸ್ಥಾಪಕ ನಾಗರಾಜ ಮ್ಯಾಕಿ ತಿಳಿಸಿದರು.

ತಾಲೂಕಿನ ಹಲುವಾಗಲು ಗ್ರಾಮದಲ್ಲಿರುವ ಜ್ಞಾನದೀಪ ನವೋದಯ ಕೋಚಿಂಗ್ ಸೆಂಟರ್‌ನಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಸೋಮವಾರ ಮಾತನಾಡಿದರು.

ಜೀವನದಲ್ಲಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಶಿಕ್ಷಣ ಬೇಕು. ಇದರಿಂದಾಗಿ ವಿದ್ಯಾರ್ಥಿ ಜೀವನ ಅತ್ಯಂತ ಪ್ರಮುಖ ಘಟ್ಟವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪ್ರಾಥಮಿಕ ಹಾಗೂ ಪ್ರೌಢಾವಸ್ಥೆಯಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ತಿಳಿದುಕೊಂಡರೆ ಭವಿಷ್ಯದ ಕನಸು ಸುಲಭವಾಗಿ ಸಾಕಾರಗೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಭಾರತ ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಅದಕ್ಕೆ ನಮ್ಮಲ್ಲಿನ ಶಿಕ್ಷಣ ಕ್ರಾಂತಿಯೇ ಕಾರಣ. ತಂದೆ-ತಾಯಿ ಪಡುವ ಕಷ್ಟಗಳನ್ನು ನೋಡುತ್ತಾ ಬೆಳೆವ ಮಕ್ಕಳು ಜೀವನದಲ್ಲಿ ಅತ್ಯಂತ ದೊಡ್ಡ ಸಾಧನೆ ಮಾಡುತ್ತಾರೆ, ನಾನು ಈ ಸಂಸ್ಥೆ ಬೆಳೆಸಲು ಹಲವರ ಸಹಕಾರದಿಂದ ಸಾಧ್ಯವಾಗಿದೆ. ಕಷ್ಟದ ಬದುಕನ್ನು ಎದುರಿಸಲು ನಾವುಗಳು ಸನ್ನದ್ದರಾಗಿರಬೇಕು, ಆಗ ಮಾತ್ರ ನಾವು ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಗುರು ಹಿರಿಯರನ್ನು ಗೌರವಿಸುವ ಗುಣ ಅಳವಡಿಸಕೊಳ್ಳಬೇಕು ಎಂದು ನಾಗರಾಜ ಮ್ಯಾಕಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net