

ಬೆಳಗಾವಿ: ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ತಾಂತ್ರಿಕ ವಿಷಯದಲ್ಲಿ ವಿನೂತನ ಸಂಶೋಧನೆಗಳನ್ನು ಮಾಡಬೇಕು ಎಂದು ಹುಬ್ಬಳ್ಳಿಯ ಕೆಎಲ್‌ಇ ಟೆಕ್ನಾಲಜಿಕಲ್ ಯುವನಿವರ್ಸಿಟಿ ಉಪಕುಲಪತಿ ಪ್ರೊ.ಅಶೋಕ ಶೆಟ್ಟರ್ ಹೇಳಿದರು.
ಕೆಎಲ್‌ಇ ಟೆಕ್ನಾಲಜಿಕಲ್ ಯುನಿವರ್ಸಿಟಿ ಡಾ.ಎಂ.ಎಸ್. ಶೇಷಗಿರಿ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಪ್ರಯೋಗ ಶಿಶಿರ ಮತ್ತು ಅವಿನ್ಯಾ ಶಿಶಿರ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಹೊಸ ಆವಿಷ್ಕಾರಗಳನ್ನು ಕೈಗೊಂಡು ಕೆಎಲ್‌ಇ ಸಂಸ್ಥೆಯ ಕೀರ್ತಿ ಹೆಚ್ಚಿಸಬೇಕು ಎಂದರು.
ಕಾಲೇಜಿನ ಪ್ರಾಚಾರ್ಯ ಡಾ. ಬಸವರಾಜ ಕಟಗೇರಿ, ಬೋಧಕ ಸಿಬ್ಬಂದಿಯು ವಿದ್ಯಾರ್ಥಿಗಳ ಪ್ರಯೋಗಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಡೀನ್ಸ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಐಶ್ವರ್ಯ ಚೌಕಿಮಠ ನಿರೂಪಿಸಿದರು. ಪ್ರೊ.ಎಸ್.ಬಿ.ಕುಲಕರ್ಣಿ ವಂದಿಸಿದರು.