

ಹುಮನಾಬಾದ್: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಯುಗದಲ್ಲಿ ಶ್ರಮ ವಹಿಸಿ ಗುರಿ ತಲುಪಬೇಕು ಎಂದು ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ ಪಾಟೀಲ್ ಹೇಳಿದರು.
ಪಟ್ಟಣದ ಶ್ರೀ ವೀರಭದ್ರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಒಂದು ದಿನದ ರಾಷ್ಟಿಯ ಕಾರ್ಯಾಗಾರದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಯುಗಕ್ಕೆ ಹೊಂದಿಕೊಳ್ಳಬೇಕು. ಇಂದಿನ ಯುಗದಲ್ಲಿ ಬಾಳಿ ಬದುಕಬೇಕಾದರೆ ಸ್ಪರ್ಧಾತ್ಮಕ ಪರೀಕ್ಷೆಗಳು ಪಾಸು ಮಾಡುವುದು ಅವಶ್ಯ. ಇದರಿಂದ ಮಾತ್ರ ನಮ್ಮ ಗುರಿ ತಲುಪಲು ಸಾಧ್ಯ ಎಂದರು.
ಬೀದರ ವಿವಿ ರಿಜಿಸ್ಟರ್ ಡಾ.ಪರಮೇಶ್ವರ ಮಾತನಾಡಿ, ಶಿಕ್ಷಕರು ಗುಣಮಟ್ಟದ ಶಿಕ್ಷಣ ಜತೆಗೆ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಬೇಕಾಗುವ ವಿಷಯಗಳನ್ನು ಕೂಡ ಬೋಧಿಸಬೇಕು. ಪರೀಕ್ಷೆ ಎದುರಿಸುವ ಸಾಮರ್ಥ್ಯ ಬೆಳೆಸಬೇಕು. ರಾಷ್ಟ್ರೀಯ ಕಾರ್ಯಾಗಾರದ ಉಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.