ಸ್ಪರ್ಧಾತ್ಮಕ ವ್ಯಕ್ತಿತ್ವ ಬೆಳೆಸುವ ಕ್ರೀಡೆ

10-kgl-photo2
ಕೊಳ್ಳೇಗಾಲ ಪಟ್ಟಣದ ಎಂ.ಜಿ.ಎಸ್.ವಿ ಮೈದಾನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕ್ರೀಡಾಕೂಟ ಉದ್ದೇಶಿಸಿ ಡಿವೈಎಸ್ಪಿ ನಾಗರಾಜು ಮಾತನಾಡುತ್ತಿರುವುದು. ಎಚ್.ಶ್ರೀಧರ್, ಚೇತನ್, ನಾಗರಾಜು, ಸ್ಟೀವನ್, ಜೋಸೆಫ್ ಅಲೆಕ್ಸಾಂಡರ್ ಇದ್ದಾರೆ.
Published on

ಕೊಳ್ಳೇಗಾಲ: ಪಟ್ಟಣದ ಮಹದೇಶ್ವರ ಕಾಲೇಜು ಮೈದಾನದಲ್ಲಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಎಸ್‌ವಿಕೆ ಬಾಲಕಿಯರ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.


ಕ್ರೀಡಾಕೂಟಕ್ಕೆ ಡಿವೈಎಸ್ಪಿ ನಾಗರಾಜು ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಮಾತನಾಡಿ, ಕ್ರೀಡೆ ಸ್ಪರ್ಧಾತ್ಮಕ ವ್ಯಕ್ತಿತ್ವವನ್ನು ಮಕ್ಕಳಲ್ಲಿ ಮೂಡಿಸುತ್ತದೆ. ಸವಾರ್ಂಗೀಣ ಅಭಿವೃದ್ಧಿಗೆ ಪೂರಕವಾಗಿದೆ. ಯಾವುದೇ ಕೆಲಸ ಮಾಡಬೇಕಾದರು ಕ್ರೀಡೆ ಸ್ಫೂರ್ತಿ ತುಂಬುತ್ತದೆ. ದೇಹದ ಆಲಸ್ಯವನ್ನು ದೂರವಿಡುತ್ತದೆ ಎಂದರು.


ಎಸ್‌ವಿಕೆ ಕಾಲೇಜು ಪ್ರಾಂಶುಪಾಲ ಎಚ್. ಶ್ರೀಧರ್, ಪಟ್ಟಣ ಪೊಲೀಸ್ ಠಾಣೆ ಪಿಎಸ್‌ಐ ಚೇತನ್, ಎಸ್‌ಡಿಎಂಸಿ ಉಪಾಧ್ಯಕ್ಷ ನಾಗರಾಜು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸ್ಟೀವನ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಜೋಸೆಫ್ ಅಲೆಕ್ಸಾಂಡರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net