ಸ್ಪೋರ್ಟ್ಸ್ ಕಿಟ್ ಪಡೆಯಲು ಅರ್ಜಿ ಆಹ್ವಾನ

Sports
Published on


      ಕಲಬುರಗಿ : ಪ್ರಸಕ್ತ ೨೦೨೦-೨೧ ಹಾಗೂ ೨೦೨೧-೨೨ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘಗಳಿಗೆ ಹೊಸದಾಗಿ ನೋಂದಣಿ ಮಾಡಿದಂತಹ ಕಲಬುರಗಿ ಜಿಲ್ಲೆಯ ಪ್ರತಿ ತಾಲ್ಲೂಕಿನ ೨ ಪರಿಶಿಷ್ಟ ಜಾತಿ ಹಾಗೂ ೧ ಪರಿಶಿಷ್ಟ ಪಂಗಡಕ್ಕೆ ಸೇರಿದವರಿಗೆ ಇಲಾಖೆಯಿಂದ ಕ್ರೀಡಾ ಗಂಟನ್ನು ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗಾಯತ್ರಿ ಅವರು ತಿಳಿಸಿದ್ದಾರೆ.

      ಯುವಜನ ಸಂಘಗಳು ಸದಸ್ಯರ ವಯೋಮಿತಿ ೧೫ ರಿಂದ ೩೫ ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು, ಕರ್ನಾಟಕ ಸಂಘ ಸಂಸ್ಥೆಗಳ ನೋಂದಾವಣಿ ಕಾಯ್ದೆ ೧೯೬೦ ರ ಅಡಿಯಲ್ಲಿ ನೋಂದಾಯಿತವಾಗಿರಬೇಕು.

      ಅರ್ಹರು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಚಂದ್ರಶೇಖರ ಪಾಟೀಲ್ ಜಿಲ್ಲಾ ಕ್ರೀಡಾಂಗಣ ಕಚೇರಿಯಲ್ಲಿ ೨೦೨೩ರ ಸೆಪ್ಟೆಂಬರ್ ೨೦ ರೊಳಗಾಗಿ ಅರ್ಜಿ ಸಲ್ಲಿಬೇಕು.  ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ವೇಳೆಯನ್ನು (ರಜಾದಿನ ಹೊರತುಪಡಿಸಿ) ಸಂಪರ್ಕಿಸಲು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net