ಸ್ವ-ಉದ್ಯೋಗದಿಂದ ಆರ್ಥಿಕ ಸ್ವಾವಲಂಬನೆ: ಕೆ.ಬಿ.ಅಶೋಕ್ ನಾಯ್ಕ

HHR WEBBB
Published on

ಹೊಳೆಹೊನ್ನೂರು: ಕೂಲಿ ಕಾರ್ಮಿಕರು ದೈನಂದಿನ ಕೆಲಸದ ಜತೆಗೆ ಸ್ವ ಉದ್ಯೋಗ ಕೈಗೊಂಡರೆ ಆರ್ಥಿಕವಾಗಿ ಸ್ವಾವಲಂಬಿಗಳಾಗಬಹುದು ಎಂದು ಶಾಸಕ ಕೆ.ಬಿ.ಅಶೋಕ್ ನಾಯ್ಕ ತಿಳಿಸಿದರು. ಮಾರಶೆಟ್ಟಿಹಳ್ಳಿಯಲ್ಲಿ ಭದ್ರ ಹಸಿರು ರೈತ ಉತ್ಪಾದನಾ ಕಂಪನಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಟೈಲರಿಂಗ್‌ಗೆ ಹೆಚ್ಚಿನ ಬೇಡಿಕೆ ಇದ್ದು ಉತ್ತಮ ಆದಾಯ ಗಳಿಸಬಹುದಾಗಿದೆ. ಬಡ ರೈತರು ಹಾಗೂ ಕೂಲಿ ಕಾರ್ಮಿಕರು ಇದರ ಸದುಪಯೋಗ ಪಡೆದು ಸಬಲರಾಗಬೇಕು ಎಂದರು. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಡ ಕುಟುಂಬಗಳಿಗೆ ಉಚಿತವಾಗಿ ಹೊಲಿಗೆ ಯಂತ್ರ ನೀಡುತ್ತಿದೆ. ಇದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವ ಪ್ರಯತ್ನ ನಮ್ಮದಾಗಿರಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಪರ ಹಾಗೂ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುತ್ತಿದ್ದು ಸಾಕಷ್ಟು ಅನುದಾನ ಕ್ಷೇತ್ರಕ್ಕೆ ಬಂದಿದೆ. ಇನ್ನೂ ಕೆಲವೇ ವರ್ಷಗಳಲ್ಲಿ ಮಾದರಿ ಕ್ಷೇತ್ರವಾಗುವುದರಲ್ಲಿ ಅನುಮಾನವಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net