

ಬೆಳಗಾವಿ: ಪ್ರತಿ ವರ್ಷದಂತೆ ಈ ವರ್ಷವೂ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕಸದ ರಾಶಿಗಳನ್ನು ಗುರುತಿಸಿ, ಅವುಗಳನ್ನು ಸ್ವಚ್ಛಗೊಳಿಸುವುದು, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ, ಸಫಾಯಿ ಮಿತ್ರರರಿಗೆ ಸುರಕ್ಷಾ ಶಿಬಿರಗಳನ್ನು ಹಮ್ಮಿಕೊಳ್ಳುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನ್ನವರ ಹೇಳಿದರು.
ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಂಗವಾಗಿ ತಾಲೂಕಿನ ಬಸ್ತವಾಡ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಸ್ವಚ್ಛ ವಾಹಿನಿಗೆ ಚಾಲನೆ ನೀಡಿ, ಸಾಮೂಹಿಕ ಶ್ರಮದಾನದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಧಿಕಾರಿ, ಜನಪ್ರತಿನಿಧಿಗಳು ಹಾಗೂ ಸ್ವ-ಸಹಾಯ ಸಂಘದ ಮಹಿಳೆಯರು, ಗ್ರಾಪಂ ಆವರಣ, ಸುವರ್ಣ ಸೌಧದ ಸೈನ್ಸ ಪಾರ್ಕಿನಲ್ಲಿ ಸ್ವಚ್ಛತೆ ಕೈಗೊಂಡು ಸಸಿ ನೆಟ್ಟರು. ಇದೇ ವೇಳೆ ರಾಷ್ಟ್ರೀಯ ಜೀವನೋಪಾಯ ಮತ್ತು ಮಾದಕ ಮುಕ್ತ ಕರ್ನಾಟಕ ಅಭಿಯಾನಕ್ಕೂ ಚಾಲನೆ ನೀಡಲಾಯಿತು.
ಸಾಮಾಜಿಕ ಅರಣ್ಯ ವಲಯಾಧಿಕಾರಿ ಗಿರೀಶ ಇಟಗಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ ಸಾವಂತ, ಸಹಾಯಕ ನಿರ್ದೇಶಕ ಬಸವಂತ ಕಡೆಮನಿ, ಗ್ರಾಪಂ ಅಧ್ಯಕ್ಷೆ ಶಿಲ್ಪಾ ಪಾಟೀಲ, ಉಪಾಧ್ಯಕ್ಷ ವಿಠ್ಠಲ ಸಾಂಬ್ರೇಕರ, ಪಿಡಿಒ ಹಣಮಂತ ಪೋಳ, ಜಿಪಂ ಎಸ್.ಬಿ.ಎಂ ಯೋಜನೆಯ ಜಿಲ್ಲಾ ಸಮಾಲೋಚಕರುಗಳು, ಎನ್.ಆರ್.ಎಲ್.ಎಂ ಯೋಜನೆಯ ಸಿಬ್ಬಂದಿಗಳು, ತಾಲೂಕಾ ಪಂಚಾಯಿತಿ ಸಿಬ್ಬಂದಿ ಸಿಬ್ಬಂದಿ ವರ್ಗದವರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿದ್ದರು.