ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿ

2MDG1
Published on

ಮುಂಡರಗಿ: ತಾಲೂಕು ಆಡಳಿತ ನೇತೃತ್ವದಲ್ಲಿ ಪುರಸಭೆ ಸೇರಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಹಾತ್ಮ ಗಾಂಧಿ ಜಯಂತಿ ನಿಮಿತ್ತ ಶುಕ್ರವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

ಈ ವೇಳೆ ದಿವಾಣಿ ನ್ಯಾಯಾಧೀಶ ಆರ್.ಎ. ಮಹಾಜನ್ ಮಾತನಾಡಿ, ಸ್ವಚ್ಛತಾ ಕಾರ್ಯ ಅಭಿಯಾನಕ್ಕೆ ಸೀಮಿತವಾಗದೆ ಪ್ರತಿ ದಿನವೂ ನಡೆಯಬೇಕು. ಸ್ವಚ್ಛತೆ ಮೂಲಕ ಆರೋಗ್ಯ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.

ತಹಸೀಲ್ದಾರ್ ಆಶಪ್ಪ ಪೂಜಾರಿ ಮಾತನಾಡಿ, ಬೀದಿಬದಿ ವ್ಯಾಪಾರಸ್ಥರು ಸುತ್ತಮುತ್ತಲಿನ ಸ್ವಚ್ಛತೆ ಬಗ್ಗೆ ಗಮನ ಹರಿಸಬೇಕು ಎಂದರು. ಬಿಇಒ ಗಂಗಾಧರ ಅಣ್ಣಿಗೇರಿ, ಆರ್​ಎಫ್​ಒ ಎಸ್.ಪಿ. ಹೊಸಳ್ಳಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ರಂಜನಾ ತಳಗೇರಿ, ಪ್ರಭಾರಿ ಮುಖ್ಯಾಧಿಕಾರಿ ರಮೇಶ ಹೊಸಮನಿ, ನೀರಾವರಿ ಇಲಾಖೆಯ ಎಇ ಬಸವರಾಜ ಎ., ಉಪತಹಸೀಲ್ದಾರ್ ಎಸ್.ಎಸ್. ಬಿಚ್ಚಾಲಿ, ಎಂ.ಬಿ. ಪಾಟೀಲ,

ಶಿವು ನಾಡಗೌಡ್ರ, ಮಂಜುನಾಥ ಅರಳಿ, ಎನ್.ಬಿ. ಹಿರೇಮಠ, ಎಂ.ಡಿ. ದೊಡ್ಡಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net