ಸ್ವಚ್ಛತಾ ಸಪ್ತಾಹಕ್ಕೆ ಡಿಸಿಯಿಂದ ಚಾಲನೆ

2 KWR 1
Published on

ಕಾರವಾರ: ಕೋವಿಡ್ ನಿಬಂಧನೆಗಳು ಹಾಗೂ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಗಾಂಧಿ ಜಯಂತಿಯನ್ನು ಶುಕ್ರವಾರ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ. ಅವರು ಕಾರವಾರ ನಗರಸಭೆ ಉದ್ಯಾನದಲ್ಲಿ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ನಂತರ ಟ್ಯಾಗೋರ್ ಕಡಲ ತೀರದಲ್ಲಿ ಎಲ್ಲ ಸರ್ಕಾರಿ ನೌಕರರ ಜತೆಗೂಡಿ ಸ್ವಚ್ಛತಾ ಕಾರ್ಯ ನಡೆಸಿ ಸ್ವಚ್ಛತಾ ಸಪ್ತಾಹಕ್ಕೆ ಚಾಲನೆ ನೀಡಿದರು. ಜಿಪಂ ಸಿಇಒ ಎಂ.ರೋಶನ್, ಎಸ್​ಪಿ ಶಿವಪ್ರಕಾಶ ದೇವರಾಜು, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ., ಎಸಿ ಪ್ರಿಯಾಂಗಾ ಎಂ. ಇದ್ದರು.

9 ರವರೆಗೆ ಸ್ವಚ್ಛತೆ: ಅ.9 ರವರೆಗೂ ನಗರದಲ್ಲಿ ಸ್ವಚ್ಛತಾ ಸಪ್ತಾಹ ನಡೆಯಲಿದೆ. ನಗರದ ವಿವಿಧ ಕಚೇರಿಗಳ ಸಿಬ್ಬಂದಿ ಒಂದೊಂದು ಪ್ರದೇಶಗಳಲ್ಲಿ ಸ್ವಚ್ಛತೆ ಕೈಗೊಳ್ಳಲಿದ್ದಾರೆ. ಈ ಸಂಬಂಧ ನಗರಸಭೆ ವೇಳಾ ಪಟ್ಟಿಯನ್ನು ಪ್ರಕಟ ಮಾಡಿದೆ.</

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net