ಸ್ವಚ್ಛತಾ ಸೇವೆ ಮಾಡುವವರನ್ನು ಗೌರವಿಸಿ

6 mlv 2
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 7864320;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 39;
Published on

ಮಳವಳ್ಳಿಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ

ಮಳವಳ್ಳಿ: ಸ್ವಚ್ಛತಾ ಸೇವೆ ಮಾಡುವ ಪೌರಕಾರ್ಮಿಕರನ್ನು ಗೌರವಭಾವದಿಂದ ಕಾಣಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು. ಪಟ್ಟಣದ ಪುರಸಭೆ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಸಂದರ್ಭ ಪೌರಕಾರ್ಮಿಕರನ್ನು ಗೌರವಿಸಿ ಅವರು ಮಾತನಾಡಿದರು. ಶತಮಾನದ ಹಿಂದೆ ವೃತ್ತಿ ಆಧಾರದಿಂದ ಜಾತಿ ಪದ್ಧತಿ ಜಾರಿಗೆ ಬಂತು. ಈ ಹಿನ್ನೆಲೆಯಲ್ಲಿ ಎಲ್ಲ ವೃತ್ತಿಗಳೂ ಮಾನ್ಯವಾಗಿವೆ. ಕೇವಲ ವೃತ್ತಿ, ವರ್ಗ, ಸಮುದಾಯದ ಚೌಕಟ್ಟಿನಲ್ಲಿ ಯಾರನ್ನೂ ಕೀಳಾಗಿ ಕಾಣಬಾರದು ಎಂದರು..

ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಮತ ಚಲಾಯಿಸುವ ಹಕ್ಕನ್ನು ಸಂವಿಧಾನ ನೀಡಿದೆ. ಎಲ್ಲರನ್ನೂ ಸಮಾನತೆಯಿಂದ ಕಾಣುವ ವ್ಯವಸ್ಥೆ ನಮ್ಮದಾಗಬೇಕು. ಪೌರಕಾರ್ಮಿಕರ ಮಕ್ಕಳ ಭವಿಷ್ಯ ಉಜ್ವಲವಾಗಿ ಅವರೂ ಉನ್ನತ ಸ್ಥಾನಮಾನ ಪಡೆದುಕೊಳ್ಳುವಂತಾಗಬೇಕು ಎಂದರು. ಪೌರಕಾರ್ಮಿಕರನ್ನು ಮೆರವಣಿಗೆ ಮೂಲಕ ವೇದಿಕೆ ಬಳಿಗೆ ಕರೆತರಲಾಯಿತು. ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ಉಪಾಧ್ಯಕ್ಷ ಬಸವರಾಜು ಇತರ ಸದಸ್ಯರು ತಮಟೆ ಸದ್ದಿಗೆ ಹೆಜ್ಜೆ ಹಾಕಿ ಕುಣಿದು ಗಮನ ಸೆಳೆದರು.

ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ಉಪಾಧ್ಯಕ್ಷ ಬಸವರಾಜು, ಸದಸ್ಯರಾದ ನೂರುಲ್ಲಾ, ನಾಗೇಶ್, ಸಿದ್ದರಾಜು, ರವಿ, ರಾಜಶೇಖರ, ಶಿವಸ್ವಾಮಿ, ಮಣಿ, ಪ್ರಮೀಳಾ, ಮಾಜಿ ಅಧ್ಯಕ್ಷ ದೊಡ್ಡಯ್ಯ, ಮುಖಂಡರಾದ ನಾಗರಾಜು, ರಮೇಶ್, ಅಂಕಣ್ಣ, ಕೃಷ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net