ಸ್ವಚ್ಛತೆ ಕಾಪಾಡುವದು ಪ್ರತಿಯೊಬ್ಬರ ಕರ್ತವ್ಯ

04ydg02
Published on

ಯಾದಗಿರಿ: ನಮ್ಮ ಸುತ್ತ-ಮುತ್ತಲಿನ ಪರಿಸರ ಸ್ವಚ್ಛತೆ ಕಾಪಾಡುವದು ಪ್ರತಿಯೊಬ್ಬ ಜವಾಬ್ದಾರಿಯುತ ಪ್ರಜೆಗಳ ಕರ್ತವ್ಯವಾಗಿದೆ ಎಂದು ತಾಪಂ ಇಒ ಬಸವರಾಜ ಶರಬೈ ಸಲಹೆ ನೀಡಿದರು.

ಗಾಂಧಿ ಜಯಂತಿ ಅಂಗವಾಗಿ ನಗರದ ತಾಪಂ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಸ್ವಚ್ಛತೆಗಾಗಿ ಶ್ರಮದಾನ ಕಾರ್ಯಕ್ರಮದಲ್ಲಿ ಮಾತನಾಡಿ, ಸತ್ಯ, ಅಹಿಂಸೆ, ಸತ್ಯಾಗ್ರಹದ ಮೂಲಕ ಭಾರತ ಸ್ವಾತಂತ್ರೃ ಹೋರಾಟಕ್ಕಾಗಿ ಬಾಪುಜಿ ತಮ್ಮ ಜೀವನ ತ್ಯಾಗ ಮಾಡಿದ್ದಾರೆ. ಅವರ ತತ್ವಾದರ್ಶಗಳನ್ನು ಎಲ್ಲರೂ ಅಳವಸಿಕೊಳ್ಳಬೇಕಿದೆ. ಗಾಂಧಿಜೀ ಕಂಡ ರಾಮರಾಜ್ಯ ಹಾಗೂ ಸ್ವಚ್ಛ ಭಾರತದ ಕನಸು ಈಡೇರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮುಂದಾಗಬೇಕಿದೆ ಎಂದು ಹೇಳಿದರು.

ನಗರ ಮತ್ತು ಗ್ರಾಮೀಣ ಭಾಗದಲ್ಲಿನ ಜನತೆ ತಮ್ಮ ಮನೆ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ನಿತ್ಯ ಮನೆಯಲ್ಲಿ ಉತ್ಪತ್ತಿಯಾಗುವ ಹಸಿ ಮತ್ತು ಒಣಕಸವನ್ನು ಗ್ರಾಪಂನಿಂದ ಬರುವ ವಾಹನದಲ್ಲಿ ಹಾಕಬೇಕು. ಚರಂಡಿಯಲ್ಲಿ ಕಸ ಎಸೆಯದೆ ಜಾಗೃತಿ ವಹಿಸಬೇಕು ಎಂದು ಕಿವಿಮಾತು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net