ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯ ವಹಿಸುವಂತಿಲ್ಲ

23ydg05
Published on

ಯಾದಗಿರಿ: ಜಿಲ್ಲೆಯಲ್ಲಿ ವಾಂತಿ-ಭೇದಿ ಪ್ರಕರಣಗಳು ಆಗದಂತೆ ಮುಂಜಾಗ್ರತೆ ವಹಿಸಬೇಕು. ಒಂದು ವೇಳೆ ಅಹಿತಕರ ಘಟನೆ ನಡೆದರೆ ಸಂಬಂಸಿದ ಅಕಾರಿಗಳನ್ನೇ ನೇರ ಹೊಣೆಯನ್ನಾಗಿ ಮಾಡಬೇಕಾಗುತ್ತದೆ ಎಂದು ಜಿಲ್ಲಾಕಾರಿ ಡಾ.ಸುಶೀಲಾ ಬಿ., ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ನಗರದ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜಲಮೂಲಗಳ ಸ್ವಚ್ಚತೆ ಹಾಗೂ ನೈರ್ಮಲ್ಯ ಬಗ್ಗೆ ಕ್ರಮ ವಹಿಸುವ ಕುರಿತ ಅಕಾರಿಗಳೊಂದಿಗೆ ತುತರ್ು ಸಭೆಯಲ್ಲಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ನೀರಿನ ಮೂಲಗಳನ್ನು , ಟ್ಯಾಂಕ್ಗಳನ್ನು ಕಡ್ಡಾಯವಾಗಿ ಸ್ವಚ್ಛಗೊಳಿಸಬೇಕು ಹಾಗೂ ಚರಂಡಿ ಹೂಳೆತ್ತುವ ಕೆಲಸ ಗ್ರಾಪಂ ಪಿಡಿಒಗಳು, ಮುಖ್ಯಾಕಾರಿಗಳು ತ್ವರಿತಗತಿಯಲ್ಲಿ ಕೈಗೆತ್ತಿಕೊಂಡು ನೈರ್ಮಲ್ಯ ಕಾಪಾಡಬೇಕು. ನಿರ್ಲಕ್ಷ್ಯ ಮಾಡುವವರ ವಿರುದ್ಧ ಮುಲಾಜಿಲ್ಲದೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ನೀರು ಸರಬರಾಜಿನಲ್ಲಿ ತಾಂತ್ರಿಕ ಸಮಸ್ಯೆ ಉದ್ಭವಿಸಿದ್ದಲ್ಲಿ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ಕುರಿತು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಜಲಜೀವನ್ ಮಿಷನ್ ಮೂಲಕ ನೀರು ಒದಗಿಸಿದ ಗ್ರಾಮಗಳಲ್ಲಿ ಇಓ, ಇಂಜಿನಿಯರುಗಳು ತಪಾಸಣೆ ನಡೆಸಬೇಕು. ಸಮಸ್ಯೆಗಳಿದ್ದಲ್ಲಿ ಸರಿ ಪಡಿಸಬೇಕು ಎಂದು ನಿದರ್ೇಶನ ನೀಡಿದರು.

ಜೆಜೆಎಂ ಕಾಮಗಾರಿಯ ಕಳಪೆಯಾಗದಂತೆ ಹಾಗೂ ಕಾಟಾಚಾರದ ಕೆಲಸ ಮಾಡಿದರೆ ಸಂಬಂಸಿದ ಅಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ತಾಲೂಕು ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲೂ ಪ್ರತಿದಿನ ನೀರಿನ ಟ್ಯಾಂಕ್ ಹಾಗೂ ಚರಂಡಿ ಸ್ವಚ್ಛತೆ ಇರುವಂತೆ ನೋಡಿಕೊಳ್ಳಬೇಕು ಅಂತೆಯೇ ಪ್ರತಿ ಗ್ರಾಮದ ಜಲ ಮೂಲಗಳಿಂದ ನೀರಿನ ಮಾದರಿ ಪರೀಕ್ಷೆಯನ್ನೂ ಸತತ ಮಾಡಿಸಬೇಕು. ಗ್ರಾಪಂ ಅಭಿವೃದ್ಧಿ ಅಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ಗಂಭೀರತೆಯನ್ನು ಅರ್ಥಮಾಡಿಕೊಂಡು ವಹಿಸಿದ ಕರ್ತವ್ಯವನ್ನು ಚಾಚೂ ತಪ್ಪದೇ ಪಾಲನೆ ಮಾಡಬೇಕು. ಶುದ್ದ ಕುಡಿಯುವ ನೀರಿನ ಕುರಿತಂತೆ ಜನರಲ್ಲಿ ಅರಿವು ಮೂಡಿಸುವಂಥ ಕೆಲಸ ಮಾಡುವಂತೆ ತಿಳಿಸಿದರು.

ನೇಮಿಸಲಾದ ನೋಡಲ್ ಅಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ನ್ಯೂನತೆಗಳು ಕಂಡುಬಂದರೆ ಅವುಗಳನ್ನು ತಕ್ಷಣವೇ ಸರಿಪಡಿಸಲು ಸಂಬಂಧಪಟ್ಟ ಇಲಾಖೆ ಅಕಾರಿಗಳಿಗೆ ಸೂಕ್ತ ಸಲಹೆ,ಸೂಚನೆಗಳನ್ನು ನೀಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net