ಸ್ವಚ್ಛತೆಗೆ ಪ್ರತಿಯೊಬ್ಬರೂ ಕೈಜೋಡಿಸಿ

Published on

ಬಳ್ಳಾರಿ : ನಗರವನ್ನು ಸ್ವಚ್ಛ-ಸುಂದರ ನಗರವನ್ನಾಗಿಸಲು ಪ್ರತಿಯೊಬ್ಬರು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್ ಹೇಳಿದರು.
ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಹಾಗೂ ಲಿಯಾ ಯೂತ್ ಅಸೋಸಿಯೇಷನ್ ಸಹಯೋಗದೊಂದಿಗೆ ಸೋಮವಾರ ಆಯೋಜಿಸಿದ್ದ ಮಹ್ಮಾತ ಗಾಂಧಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ನಗರದಲ್ಲಿ ದಿನನಿತ್ಯ ಕಸ ವಿಲೇವಾರಿ ಮಾಡಲಾಗುತ್ತಿದ್ದು, ವಿವಿಧ ಬಗೆಯ ತಾಜ್ಯಗಳನ್ನು ವಿಂಗಡಿಸಿ ವಿಲೇವಾರಿ ಮಾಡುವ ವಾಹನಗಳಿಗೆ ನೀಡಬೇಕು. ಸ್ವಚ್ಛತಾ ಕಾರ್ಯ ಕೈಗೊಳ್ಳುವ ಪೌರಕಾರ್ಮಿಕರಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಅರಣ್ಯ ಇಲಾಖೆಯ ಪಾಯಜ್ ಕ್ವಯಜ್ ಮಾತನಾಡಿ, ಪ್ರತಿಯೊಬ್ಬರು ದಿನನಿತ್ಯ ತಮ್ಮ ಸುತ್ತ-ಮುತ್ತಲಿನಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಸ್ವಚ್ಛತೆಯಿಂದ ಇದ್ದರೆ ಯಾವ ರೋಗಗಳು ಸುಳಿಯುವುದಿಲ್ಲ. ಹಾಗೆಯೇ ಪರಿಸರ ಮಾಲಿನ್ಯವಾಗುವುದಿಲ್ಲ ಎಂದರು. ಬಳಿಕ ವಿದ್ಯಾರ್ಥಿಗಳಿಗೆ ಕ್ಯಾಪ್, ಪುಸ್ತಕ-ಪೆನ್ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net