ಸ್ವಚ್ಛತೆಯ ಅರಿವು ಮೂಡಿಸಿ

10 YERRISWAMY 02
Published on

ಬಳ್ಳಾರಿ : ಪ್ರಸ್ತುತ ಡೆಂೆ ಜ್ವರ ಹಾಗೂ ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ನಾಗರಿಕರ ಆರೋಗ್ಯ ದೃಷ್ಟಿಯಿಂದ ಎಲ್ಲರೂ ಮನೆಯ ಸುತ್ತಲೂ ಸ್ವಚ್ಛತೆ ಕಾಪಾಡಿಕೊಳ್ಳಲು ಅರಿವು ಮೂಡಿಸಬೇಕು ಎಂದು ಪಾಲಿಕೆ ಮೇಯರ ಮುಲ್ಲಂಗಿ ನಂದೀಶ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಪಾಲಿಕೆಯ ಸಭಾಂಗಣದಲ್ಲಿ ಮಂಗಳವಾರ ನಡೆದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು. ನಗರದಲ್ಲಿ ಆರೋಗ್ಯ ಇಲಾಖೆಯಿಂದ ಲಾರ್ವಾ ಸಮೀಕ್ಷೆ ನಡೆಯುತ್ತಿದ್ದು, ತಂಡವು ಮನೆಗೆ ಭೇಟಿ ನೀಡಿದಾಗ ಸಾರ್ವಜನಿಕರು ಸಹಕರಿಸಬೇಕು. ಪಾಲಿಕೆ ವತಿಯಿಂದ ಧೂಮೀಕರಣ ಮಾಡಲು ಕ್ರಮ ವಹಿಸಲಾಗುವುದು ಎಂದರು.
ಡೆಂೆ ಜ್ವರ ಹರಡುವ ಎಡಿಸ್ ಜಾತಿಯ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಬೆಳೆಯುವುದರಿಂದ ಎಲ್ಲ ಸಾರ್ವಜನಿಕರು ತಮ್ಮ ಮನೆಯಲ್ಲಿ ಯಾವುದೇ ರೀತಿಯ ನೀರು ಸಂಗ್ರಹಣೆ ಇದ್ದಲ್ಲಿ ಸರಿಯಾಗಿ ಮುಚ್ಚಬೇಕು. ನೀರಿನಲ್ಲಿ ಸೊಳ್ಳೆ ಲಾರ್ವಾ ಇರುವುದು ಕಂಡುಬಂದಲ್ಲಿ ತಕ್ಷಣವೇ ನೀರನ್ನು ಸ್ವಚ್ಛಗೊಳಿಸಲು ತಿಳಿಸಬೇಕು ಎಂದರು. ಕಟ್ಟಡ ನಿರ್ಮಾಣ, ಅಂಗಡಿ ಸ್ಥಳ, ಟೈರ್, ಎಳೆನೀರು ಚಿಪ್ಪುಗಳಲ್ಲಿ ನಿಂತ ನೀರು ಇದ್ದರೆ ತಕ್ಷಣವೇ ನೀರು ತೆರುವುಗೊಳಿಸಿ ಸೊಳ್ಳೆಗಳ ಸಂತಾನೋತ್ಪತ್ತಿಯಾಗದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು.
ಗೌರಿ ಗಣೇಶ ಹಬ್ಬದ ಪ್ರಯುಕ್ತ ನಗರದೆಲ್ಲಡೆ ಈ ಬಾರಿ ಕಡ್ಡಾಯವಾಗಿ ಪಿಓಪಿ ಮೂರ್ತಿಗಳ ತಯಾರಿಕೆ, ಪ್ರದರ್ಶನ ಹಾಗೂ ಮಾರಾಟ ನಿಷೇಧಿಸಿಲಾಗಿದೆ. ಯಾರಾದರೂ ಪಿಓಪಿ ಮೂರ್ತಿಗಳನ್ನು ತಯಾರಿಸುವುದು, ಮಾರುವುದು ಕಂಡುಬಂದಲ್ಲಿ ಜಪ್ತಿ ಮಾಡಿ ದಂಡ ವಿಧಿಸಿ ನಿಯಮಾನುಸಾರ ಕ್ರಮ ಜರುಗಿಸಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net