ಸ್ವಯಂ ಉದ್ಯೋಗಕ್ಕೆ ಆರ್ಥಿಕ ಸಹಾಯ ನೀಡಿ

25 ydg 01
Published on

ಯಾದಗಿರಿ: ಸರ್ಕಾರದ ವಿವಿಧ ಕೌಶಲಾಧಾರಿತ ಅಭಿವೃದ್ಧಿ ಯೋಜನೆಗಳಡಿ ಸ್ವಯಂ ಉದ್ಯೋಗಕ್ಕೆ ಆಯ್ಕೆಯಾದ ಫಲಾನುಭವಿಗಳಿಗೆ ಯೋಜನೆ ನಿಯಮನುಸಾರ ಆರ್ಥಿಕ ಸಹಾಯ ಧನ ನೀಡಬೇಕು ಎಂದು ರಾಯಚೂರು ಸಂಸದ ಜಿ.ಕುಮಾರ ನಾಯಕ್ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಭಾರತೀಯ ಸ್ಟೇಟ್ ಬ್ಯಾಂಕ್, ಲೀಡ್ ಬ್ಯಾಂಕ್ ಹಾಗೂ ಇತರೆ ಬ್ಯಾಂಕ್‌ಗಳ ಆಶ್ರಯದಲ್ಲಿ ಮಂಗಳವಾರ ಜಿಪಂ ಸಭಾಂಗಣದಲ್ಲಿ ಕರೆದಿದ್ದ ಬ್ಯಾಂಕ್‌ಗಳ ವಾರ್ಷಿಕ ಸಾಲ ಕ್ರಿಯಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಫಲಾನುಭವಿಗಳಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ಅವರ ಪ್ರಗತಿಗೆ ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಮುದ್ರಾ, ಪಿಎಂ ವಿಶ್ವ ಕರ್ಮ, ಪ್ರಧಾನ ಮಂತ್ರಿ ಸುರP್ಷÀ ವಿಮೆ, ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಹಾಗೂ ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನದ ಮಹಿಳಾ ಸ್ವಸಹಾಯ ಸಂಘಗಳ ಉಳಿತಾಯ ಖಾತೆ ಸೃಜನೆ, ಅಕೌಂಟ್ ಲಿಂಕ್ ಸೇರಿ ಇತರೆ ಯೋಜನೆಗಳ ಪ್ರಗತಿ ಪರಿಶೀಲಿಸಿದರು.

ಜನರು ಸ್ವಯಂ ಉದ್ಯೋಗದ ಮೂಲಕ ದೇಶದ ಆರ್ಥಿಕ ಪ್ರಗತಿ ಸಾಧಿಸಲು ಕೇಂದ್ರ ಸರ್ಕಾರ ಪಿಎಂ ವಿಶ್ವ ಕರ್ಮ ಯೋಜನೆ ಹಾಗೂ ಮುದ್ರಾ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯಡಿ ಆಯ್ಕೆಯಾದ ಗ್ರಾಮೀಣ ಹಾಗೂ ನಗರ ಪ್ರದೇಶದ ಅರ್ಹ ಫಲಾನುಭವಿಗಳಿಗೆ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಮೂಲಕ ಕೌಶಲ ತರಬೇತಿ ನೀಡಿದೆ ಎಂದು ಅವರು ವಿವರಿಸಿದರು.

ಜಿಪಂ ಸಿಇಒ ಲವೀಶ್ ಓರ್ಡಿಯಾ, ಜಿಪಂ ಮುಖ್ಯ ಲೆಕ್ಕಾಧಿಕಾರಿ ವೆಂಕಟೇಶ ಬಿ.ಚಟ್ನಳ್ಳಿ, ಯೋಜನಾ ನಿರ್ದೇಶಕ ಸಿ ಬಿ ದೇವರಮನಿ, ಭಾರತೀಯ ಸ್ಟೇಟ್ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ಸಂಜಯï ಕುಮಾರ, ಭಾರತೀಯ ರಿಸರ್ವï ಬ್ಯಾಂಕಿನ ಅಧಿಕಾರಿ ಅಲೋಕ್‌ಸಿಂಹ, ಜಿ¯್ಲÁ ಲೀಡ್ ಬ್ಯಾಂಕಿನ ವ್ಯವಸ್ಥಾಪಕ ಭೀಮರಾವ ಪಂಚಾಳ, ಭಾರತೀಯ ಸ್ಟೇಟï ಬ್ಯಾಂಕಿನ ಹಿರಿಯ ವ್ಯವಸ್ಥಾಪಕ ಸುಭಾಶಚಂದ್ರ, ಕರ್ನಾಟಕ ಗ್ರಾಮೀಣ ಬ್ಯಾಂಕಿ ಪ್ರಾದೇಶಿಕ ಕಛೇರಿ ಅಧಿಕಾರಿ ಕುಮಾರ ಸ್ವಾಮಿ, ಲೀಡ್‌ಬ್ಯಾಂಕಿಮ ಸಿಬ್ಬಂದಿ ಅಮೀರ್ ಪಟೇಲ್ ಸೇರಿದಂತೆಯೇ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net