ಸ್ವಯಂ ಉದ್ಯೋಗದಿಂದ ಸ್ವಾವಲಂಬಿ ಬದುಕು

CTD DDPI------
Published on

ಚಿತ್ರದುರ್ಗ: ವೃತ್ತಿ ಶಿಕ್ಷಣದಿಂದ ಸ್ವ ಉದ್ಯೋಗ ಕೈಗೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬಹುದಾಗಿದೆ ಎಂದು ಡಿಡಿಪಿಐ ಎಂ.ಆರ್. ಮಂಜುನಾಥ್ ಹೇಳಿದರು.

ನಗರದ ಮಹಾರಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಣ ಕಲಿಕೋತ್ಸವ ಹಾಗೂ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲರಿಗೂ ಸರ್ಕಾರಿ ಉದ್ಯೋಗ ಸಿಗುವುದು ಕಷ್ಟ.

ಆದ್ದರಿಂದ ವೃತ್ತಿ ಶಿಕ್ಷಣ ಹಾಗೂ ಕೌಶಲ ಕಲಿಕೆ ಅನಿವಾರ್ಯ. ತೋಟಗಾರಿಕೆ, ರೇಷ್ಮೆ, ಕೃಷಿ, ಹೈನುಗಾರಿಕೆ, ಟೈಲರಿಂಗ್ ಕುರಿತು ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು ಎಂದರು.

ವಿದ್ಯಾರ್ಥಿಗಳನ್ನು ಕೇವಲ ಅಂಕಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ. ಕೌಶಲಗಳ ಮೂಲಕ ಬದುಕು ರೂಪಿಸಿ ಕೊಳ್ಳುವಂತೆ ತಯಾರು ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

ವಿದ್ಯಾಧಿಕಾರಿ ಎನ್.ಆರ್. ತಿಪ್ಪೇಸ್ವಾಮಿ ಮಾತನಾಡಿ, ವೃತ್ತಿ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದರು.

ಬಿಇಒ ಎಸ್. ನಾಗಭೂಷಣ್ ಮಾತನಾಡಿದರು. ವಿಷಯ ಪರಿವೀಕ್ಷಕರಾದ ಎಸ್.ಟಿ. ಮಹಾಲಿಂಗಪ್ಪ, ಕೆ. ಶಿವಣ್ಣ, ಪ್ರಶಾಂತ್, ಗೋವಿಂದಪ್ಪ, ಚಂದ್ರಣ್ಣ, ಆಸ್ಮಫಿರ್ದೋಸ್, ಜಿಲ್ಲಾ ವೃತ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಆರ್. ಅನಂತಪ್ಪ, ಕಾರ್ಯದರ್ಶಿ ಪ್ರಕಾಶ್, ಮಹಾರಾಣಿ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಎಸ್. ಸಂದೀಪ್, ನಿಕಟಪೂರ್ವ ವೃತ್ತಿ ಶಿಕ್ಷಣ ವಿಷಯ ಪರಿವೀಕ್ಷಕ ಬಸವರಾಜ್ ಓಲೆಕಾರ್, ತಾಲೂಕು ವೃತ್ತಿ ಶಿಕ್ಷಕ ಸಂಘದ ಅಧ್ಯಕ್ಷರು, ಕಾರ‌್ಯದರ್ಶಿ ಹಾಗೂ ಪದಾಧಿಕಾರಿಗಳು, ಜಿಲ್ಲೆಯ ಎಲ್ಲ ಪ್ರೌಢಶಾಲೆಗಳ ವೃತ್ತಿ ಶಿಕ್ಷಕರು ಇದ್ದರು.

ವಸ್ತು ಪ್ರದರ್ಶನದಲ್ಲಿ ಮಲ್ಲಾಡಿಹಳ್ಳಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ತೋಟಗಾರಿಕೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net